Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿ : ಜುಲೈ 31 ರವರೆಗೆ ಅವಧಿ ವಿಸ್ತರಣೆ

04:52 PM Jul 06, 2024 IST | suddionenews
Advertisement

Advertisement

ಚಿತ್ರದುರ್ಗ. ಜುಲೈ.06:   2024-25ನೇ ಸಾಲಿಗೆ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಇದೇ ಏಪ್ರಿಲ್ ತಿಂಗಳಲ್ಲಿ ಪಾವತಿಸಿದವರಿಗೆ ಸರ್ಕಾರದ ಆದೇಶದ ಅನ್ವಯ ಶೇ.5 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿರುವುದುನ್ನು ಜುಲೈ 31 ರವರೆಗೆ ಅವಧಿ ವಿಸ್ತರಿಸಿ ಆದೇಶಿಸಲಾಗಿದೆ.

ಈ ಪ್ರಯುಕ್ತ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರು ತಮ್ಮ ಆಸ್ತಿಗಳಿಗೆ ಜುಲೈ 31 ರೊಳಗಾಗಿ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಿ, ಶೇ. 5ರಷ್ಟು ರಿಯಾಯಿತಿ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

Advertisement

ಈಗಾಗಲೇ 2024-25ನೇ ಸಾಲಿಗೆ ಮೇ ಮತ್ತು ಜೂನ್ ಮಾಹೆಯಲ್ಲಿ ಶೇ.5ರಷ್ಟು ರಿಯಾಯಿತಿ ಪಡೆಯದೇ ಪೂರ್ಣ ಪ್ರಮಾಣದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿರುವ ಆಸ್ತಿ ಮಾಲೀಕರು, ಚಲನ್ ಮತ್ತು ವಿವರದ ಪಟ್ಟಿ ತೋರಿಸಿ ಮುಂದಿನ ಆರ್ಥಿಕ ವರ್ಷ ಅಂದರೆ, 2025-26ನೇ ಸಾಲಿನಲ್ಲಿ ಆಸ್ತಿ ತೆರಿಗೆ ಪಾವತಿಸುವ ಸಂದರ್ಭದಲ್ಲಿ ಶೇ.5ರಷ್ಟು ರಿಯಾಯಿತಿ ಪಡೆಯಬಹುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

Advertisement
Tags :
bengaluruchitradurgaExtensionpaymentProperty Taxself-declaredsuddionesuddione newsಅವಧಿ ವಿಸ್ತರಣೆಆಸ್ತಿ ತೆರಿಗೆ ಪಾವತಿಚಿತ್ರದುರ್ಗಜುಲೈಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಸ್ವಯಂ ಘೋಷಿತ
Advertisement
Next Article