For the best experience, open
https://m.suddione.com
on your mobile browser.
Advertisement

ಎಸ್‌.ಆರ್‌.ಎಸ್‌ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.ನೂರರಷ್ಟು ಫಲಿತಾಂಶ

03:30 PM Apr 10, 2024 IST | suddionenews
ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ ನೂರರಷ್ಟು ಫಲಿತಾಂಶ
Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.10 : ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ  ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡ ನೂರಕ್ಕೆ ನೂರರಷ್ಟು ದಾಖಲೆಯ ಫಲಿತಾಂಶ ಬಂದಿದೆ.

Advertisement

ಮಾರ್ಚ್‌ 01 ರಿಂದ 22 ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏಪ್ರಿಲ್‌ 10 ರಂದು ಪ್ರಕಟವಾಗಿದ್ದು, ಸತತವಾಗಿ ಈ ವರ್ಷವೂ ಜಿಲ್ಲೆಗೆ ಮೊದಲ ಸ್ಥಾನವನ್ನು ಪಡೆದುಕೊಂಡಿರವುದು ವಿಶೇಷ.

ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿ ಒಟ್ಟು 448 ವಿದ್ಯಾರ್ಥಿಗಳಿಗೆ 343 ವಿದ್ಯಾರ್ಥಿಗಳು ಅತ್ಯುತ್ತನ್ನತ ಶ್ರೇಣಿ (ಡಿಸ್ಟಿಂಕ್ಷನ್‌) ಪಡೆದರೆ, ವಿವಿಧ ವಿಷಯಗಳಲ್ಲಿ ಓಟ್ಟು 51 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತೀ ತಂದಿದ್ದಾರೆ.

Advertisement


ಕಾಲೇಜಿನ ವಿದ್ಯಾರ್ಥಿಗಳಾದ ಕು. ನೇಹಾ ಎಸ್‌, 600 ಕ್ಕೆ 586 ಅಂಕಗಳನ್ನು ಪಡೆದು ಜಿಲ್ಲೆಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಕು.ಚಂದ್ರಿಕ, ಜಿ ಕಲ್ಯಾಣಿ, ಕು.ಪ್ರಖ್ಯಾತ್‌ ಎಸ್‌ ಇವರು ಕ್ರಮವಾಗಿ 585, 584 ಅಂಕ ಗಳಿಸುವ ಮೂಲಕ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿರುತ್ತಾರೆ.

ಎಸ್‌ ಆರ್‌ ಎಸ್‌ ಪಿಯು ಕಾಲೇಜು ಈ ವರ್ಷವೂ ಅತ್ಯುತ್ತಮ  ಫಲಿತಾಂಶ ದಾಖಲಿಸಿ, ಕನ್ನಡ, ಹಿಂದಿ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಸಂಖ್ಯಾಶಾಸ್ತ್ರ ಹಾಗೂ ಗಣಕ ವಿಜ್ಞಾನ ವಿಷಯಗಳಲ್ಲಿ ಶೇ. ನೂರಕ್ಕೆ ನೂರು ಅಂಕಗಳನ್ನು ಪಡೆದು ಇತಿಹಾಸವನ್ನು ಮುಂದುವರೆಸಿದ್ದಾರೆ.

ಚಳ್ಳಕೆರೆಯ ಎಸ್‌ ಆರ್‌ ಎಸ್‌ ಪಿಯು ಕಾಲೇಜು ಈ ವರ್ಷವೂ ಅತ್ಯುತ್ತಮ  ಫಲಿತಾಂಶ ದಾಖಲಿಸಿ,
ವಿಜ್ಞಾನ ವಿಭಾಗದಲ್ಲಿ 151 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ.95ರಷ್ಟು ವಿದ್ಯಾರ್ಥಿಗಳು ಉತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 36, ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ.98ರಷ್ಟು ವಿದ್ಯಾರ್ಥಿಗಳು ಉತೀರ್ಣರಾಗಿರುತ್ತಾರೆ. ಕನ್ನಡ-೦3, ರಸಾಯನ ಶಾಸ್ತ್ರ-03, ಜೀವಶಾಸ್ತ್ರ-05, ಗಣಕ ವಿಜ್ಞಾನ-02, ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದಿರುತ್ತಾರೆ.

ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕೈಗೊಂಡ ಕ್ರಮಗಳು ಅತ್ಯುತ್ತಮ ಯಶಸ್ಸು ಗಳಿಸಿ ಎಸ್‌ ಆರ್‌ ಎಸ್‌ ಪಿಯು ಕಾಲೇಜು ಗುಣಮಟ್ಟದ ತರಬೇತಿಯಲ್ಲಿ ತನ್ನ ನಾಗಲೋಟವನ್ನು ಮುಂದುವರೆಸಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಬಿ. ಎ. ಲಿಂಗಾರೆಡ್ಡಿ ಯವರು ಅಭಿಪ್ರಾಯ ಪಟ್ಟಿದ್ದಾರೆ.

ಕಾಲೇಜಿಗೆ ಹಾಗೂ ಜಿಲ್ಲೆಗೆ  ಕೀರ್ತೀ ತಂದಿರುವ ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರಾದ ಬಿ ಎಲ್‌ ಅಮೋಘ್‌, ಆಡಳಿತಾಧಿಕಾರಿಗಳಾದ ಡಾ. ರವಿ ಟಿ.ಎಸ್‌., ಪ್ರಾಂಶುಪಾಲರಾದ ಶ್ರೀ ಗಂಗಾಧರ್‌ ಈ. ಉಪ ಪ್ರಾಂಶುಪಾಲರಾದ ಶ್ರೀ ಮನೋಹರ ಬಿ,  ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು.

Tags :
Advertisement