Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕ್ರೀಡೆಯಲ್ಲಿ ಭಾಗವಹಿಸುವ ಮಕ್ಕಳಿಗೆ 25 ರಷ್ಟು ಹಾಜರಾತಿ : ಶಾಸಕ ಬಸವರಾಜು ವಿ.ಶಿವಗಂಗಾ

04:48 PM Dec 03, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 03 : ಕ್ರೀಡೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ 25 ರಷ್ಟು ಹಾಜರಾತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ತಿಳಿಸಿದರು.

Advertisement

ದಾವಣಗೆರೆ ವಿಶ್ವವಿದ್ಯಾನಿಲಯ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ದಾವಣಗೆರೆ ವಿಶ್ವವಿದ್ಯಾನಿಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂತೆಬೆನ್ನೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಕ್ರೀಡಾಂಗಣದಲ್ಲಿ ಮಂಗಳವಾರ ಆರಂಭಗೊಂಡ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಪುರುಷರ ಹಾಗೂ ಮಹಿಳೆಯರ 13 ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯದ ತಂಡದ ಆಯ್ಕೆ ಉದ್ಗಾಟಿಸಿ ಮಾತನಾಡಿದರು.

ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ಶೇ. 2 ರಷ್ಟು ಮೀಸಲಾತಿ, ಹತ್ತು ಗ್ರೇಸ್ ಅಂಕ ಸಿಗಲಿದೆ. ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ 65 ಎಕರೆ ಜಾಗವಿದ್ದು, ಸಿಂಥೆಟಿಕ್ ಟ್ರ್ಯಾಕ್‍ನೊಂದಿಗೆ ವಿಶಾಲವಾದ ಕ್ರೀಡಾಂಗಣ ನಿರ್ಮಿಸಲಾಗುವುದು. ಆಧುನಿಕ ಜೀವನದಲ್ಲಿ ಎಲ್ಲದರಲ್ಲೂ ಒತ್ತಡವಿದೆ. ರೋಗಗಳನ್ನು ತಡೆಗಟ್ಟಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಬೇಕಾದರೆ ಕ್ರೀಡೆಯಲ್ಲಿ ಪಾಲ್ಗೊಳ್ಳಿ. ಓದಿನ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ಕೊಡಿ ಎಂದು ಕ್ರೀಡಾಪಟುಗಳಿಗೆ ಶಾಸಕರು ಕರೆ ನೀಡಿದರು.

ಸ್ಪರ್ಧಾತ್ಮಕ ಯುಗವಾಗಿರುವುದರಿಂದ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳು ಭಾಗವಹಿಸಬೇಕಾದರೆ ಸತತ ಅಭ್ಯಾಸವಿರಬೇಕು. ನಮ್ಮ ರಾಜ್ಯದ ಕ್ರೀಡಾಪಟುಗಳು ಒಲಂಪಿಕ್ಸ್‍ನಲ್ಲಿ ಭಾಗವಹಿಸಿ ಚಿನ್ನದ ಪದಕ ತಂದವರಿಗೆ ಆರು ಕೋಟಿ ರೂ. ಬೆಳ್ಳಿ ಪದಕ ಗೆದ್ದವರಿಗೆ ನಾಲ್ಕು ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ನೀಡಲಿದೆ.

ರಾಜಕಾರಣಿಗಳು, ನಟರು, ಅಧಿಕಾರಿಗಳಾಗಬಹುದು. ಆದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳಾಗಿ ದೇಶಕ್ಕೆ ಗೌರವ ತರುವಂತ ಕ್ರೀಡಾಪಟುಗಳಾಗುವುದು ಕಷ್ಟ.  ಹಾಗಾಗಿ ನೀವುಗಳು ಆ ನಿಟ್ಟಿನಲ್ಲಿ ಬೆಳೆಯಬೇಕೆಂದು ಹಾರೈಸಿದರು. ಕ್ರೀಡೆಯಲ್ಲಿ ಸೋತವರು ಕುಗ್ಗದೆ, ಗೆದ್ದವರು ಹಿಗ್ಗದೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ. ಕ್ರೀಡೆಗೆ ಯಾವುದೆ ಜಾತಿ ಧರ್ಮದ ಹಂಗಿಲ್ಲ ಎಂದು ಹೇಳಿದರು.

ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಹೆಚ್.ತಿಪ್ಪೇಸ್ವಾಮಿ ಮಾತನಾಡಿ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿರುವುದರಿಂದ ಕ್ರೀಡಾಪಟುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸೌಲಭ್ಯಗಳ ಕೊರತೆಯಿಂದಾಗಿ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಬಾಚಿಕೊಳ್ಳಲು ಆಗುತ್ತಿಲ್ಲ. ಕ್ರೀಡೆಯಲ್ಲಿ ಭಾಗವಹಿಸುವವರಿಗೆ ಐವತ್ತರಷ್ಟು ಹಾಜರಾತಿಯನ್ನು ಶಾಲಾ-ಕಾಲೇಜುಗಳಲ್ಲಿ ಕೊಡಬೇಕೆಂದು ಶಾಸಕ ಬಸವರಾಜ ವಿ.ಶಿವಗಂಗಾರವರಲ್ಲಿ ವಿನಂತಿಸಿದರು.

ಕ್ರೀಡಾಕೂಟದ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡಾ.ವೀರೇಂದ್ರ ಕೆ.ಎಂ. ಮಾತನಾಡುತ್ತ 2007 ರಲ್ಲಿ ಸಂತೆಬೆನ್ನೂರಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭವಾಯಿತು. ಈ ವರ್ಷ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನಡೆಸುತ್ತಿದ್ದೇವೆ. ವಾಲಿಬಾಲ್ ಕ್ರೀಡೆಯನ್ನು ಆಡಿಸಲಾಗುವುದು. ನಮ್ಮ ಕಾಲೇಜಿನ ಕ್ರೀಡಾಪಟುಗಳನ್ನು ರಾಜ್ಯ ರಾಷ್ಟ್ರಮಟ್ಟಕ್ಕೆ ಪರಿಚಯಿಸಬೇಕೆಂಬುದು ನಮ್ಮ ಆಸೆ ಎಂದು ಹೇಳಿದರು. ಸಿಂಡಿಕೇಟ್ ಸದಸ್ಯರುಗಳಾದ ಡಾ.ಬಿ.ಕೆ.ಪ್ರೇಮ, ಪ್ರಶಾಂತ್ ಆರ್.ಟಿ. ಡಾ.ಪ್ರಶಾಂತ್ ಎನ್.ಸಿ. ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಗಿರಿಸ್ವಾಮಿ ಹೆಚ್. ಇವರುಗಳು ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಕ್ರೀಡಾ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.

Advertisement
Tags :
25 ರಷ್ಟು ಹಾಜರಾತಿ25% attendancebengaluruchildren participating in sportschitradurgakannadaKannadaNewsMLA Basavaraju V. Shivagangasuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಕ್ರೀಡೆಚಿತ್ರದುರ್ಗಬೆಂಗಳೂರುಶಾಸಕ ಬಸವರಾಜು ವಿ.ಶಿವಗಂಗಾಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article