For the best experience, open
https://m.suddione.com
on your mobile browser.
Advertisement

ಸೆಪ್ಟೆಂಬರ್ 20 ರಿಂದ 24 ರವರೆಗೆ ತರಳಬಾಳು ಜಗದ್ಗುರು ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 32 ನೇ ಶ್ರದ್ದಾಂಜಲಿ ಸಮಾರಂಭ

08:03 AM Sep 19, 2024 IST | suddionenews
ಸೆಪ್ಟೆಂಬರ್ 20 ರಿಂದ 24 ರವರೆಗೆ ತರಳಬಾಳು ಜಗದ್ಗುರು ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 32 ನೇ ಶ್ರದ್ದಾಂಜಲಿ ಸಮಾರಂಭ
Advertisement

ವರದಿ ಮತ್ತು ಫೋಟೋ ಕೃಪೆ : ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

Advertisement
Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ತರಳಬಾಳು ಜಗದ್ಗುರು ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 32 ನೇ ಶ್ರದ್ದಾಂಜಲಿ ಸಮಾರಂಭ ಸೆ.20 ರಿಂದ 24 ರವರೆಗೆ ಸಿರಿಗೆರೆಯಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿದೆ ಎಂದು ಮಠದ ಕಾರ್ಯದರ್ಶಿ ಓಂಕಾರಪ್ಪ ತಿಳಿಸಿದರು.

Advertisement

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 20 ರಂದು ಸಂಜೆ ಆರು ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ವಿಧಾನಪರಿಷತ್ ಶಾಸಕ ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ವಿದ್ಯಾಧರ್, ಹಾಸ್ಯ ಸಾಹಿತಿ ಎಂ.ಎಸ್.ನರಸಿಂಹಮೂರ್ತಿ ಇವರುಗಳು ಪಾಲ್ಗೊಳ್ಳುವರು.

Advertisement

ನಿವೃತ್ತ ಮುಖ್ಯೋಪಾಧ್ಯಾಯ ಬಸವರಾಜ ಗಿರಿಯಾಪುರ ಉಪನ್ಯಾಸ ನೀಡಲಿದ್ದಾರೆ. ನಂತರ ಸಾಂಸ್ಕøತಿಕ ಕಾರ್ಯಕ್ರಮ ನೃತ್ಯ ಹಾಗೂ ಭರತನಾಟ್ಯ ಪ್ರದರ್ಶನವಿರುತ್ತದೆ ಎಂದು ಹೇಳಿದರು.

Advertisement

21 ರ ಸಂಜೆ ಆರು ಗಂಟೆಯ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ, ಮಾಜಿ ಸಚಿವ ಹೆಚ್.ಆಂಜನೇಯ, ದಾವಣಗೆರೆ ಜಿಲ್ಲಾಧಿಕಾರಿ ಡಿ.ಎಂ.ಗಂಗಾಧರಸ್ವಾಮಿ, ಚಿತ್ರದುರ್ಗ ರಕ್ಷಣಾಧಿಕಾರಿ ರಂಜಿತ್‍ಕುಮಾರ್, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಇವರುಗಳು ಭಾಗವಹಿಸಲಿದ್ದಾರೆ.

22 ರಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಶುಭ ಧನಂಜಯ್ ಇವರುಗಳು ಆಗಮಿಸುವರು.

23 ರಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ, ಹೊನ್ನಾಳಿ ಶಾಸಕ ಶಾಂತನಗೌಡ ಇವರುಗಳು ಪಾಲ್ಗೊಳ್ಳುವರು.

24 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಅಧ್ಯಕ್ಷತೆ ವಹಿಸುವರು

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ, ಶಂಕರ ಎಂ.ಬಿದರಿ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಕರ್ನಾಟಕ ನೀರಾವರಿ ನಿಗಮ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಬಾವಿ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ ಇವರುಗಳು ಆಗಮಿಸಲಿದ್ದಾರೆ.

ಬೃಹನ್ಮಠ ಸಿರಿಗೆರೆಯ ಕಾನೂನು ಸಲಹೆಗಾರ ಸೋಮಶೇಖರಪ್ಪ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Tags :
Advertisement