Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಲೋಕ ಅದಾಲತ್ ‌ನಲ್ಲಿ ಸರ್ವೋಚ್ಛ ನ್ಯಾಯಾಲಯದ 3 ಪ್ರಕರಣ ಸೇರಿದಂತೆ 4973 ಪ್ರಕರಣಗಳು ಇತ್ಯರ್ಥ : ಪ್ರಧಾನ ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ ಮಾಹಿತಿ

04:30 PM Aug 08, 2024 IST | suddionenews
Advertisement

 

Advertisement

ಚಿತ್ರದುರ್ಗ. ಆಗಸ್ಟ್.08:  ಜುಲೈ 13 ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4973 ವ್ಯಾಜ್ಯ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಹೇಳಿದರು.

ಗುರುವಾರ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

Advertisement

1,16,278 ವ್ಯಾಜ್ಯ ಪೂರ್ವ ಪ್ರಕರಣಗಳ ಜೊತೆಗೆ, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 10 ಜೋಡಿಗಳ ಮನ ಒಲಿಸಿ ಪುನಃ ಒಂದು ಮಾಡಲಾಗಿದೆ. ಈ ಮೂಲಕ ಕೌಟುಂಬಿಕ ವಿಘಟನೆ ತಪ್ಪಿ, ಮಕ್ಕಳಿಗೆ ತಂದೆ ತಾಯಿ ಪ್ರೀತಿ ದೊರೆಯುವಂತಾಗಿದೆ ಎಂದು ನ್ಯಾಯಾಧೀಶ ರೋಣ ವಾಸುದೇವ ಅಭಿಪ್ರಾಯಪಟ್ಟರು.

ಸರ್ವೋಚ್ಛ ನ್ಯಾಯಾಲಯದ 3 ಪ್ರಕರಣ ಇತ್ಯರ್ಥ :
ಸರ್ವೋಚ್ಚ ನ್ಯಾಯಾಲಯ ಸ್ಥಾಪನೆಯಾದ 75 ವರ್ಷಗಳ ಅಂಗವಾಗಿ ಜುಲೈ 29 ರಿಂದ ಆಗಸ್ಟ್ 3 ವರೆಗೆ ವಿಶೇಷ ಲೋಕದಲತ್ ಆಯೋಜಿಸಲಾಗಿತ್ತು. ಇದರಲ್ಲಿ ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಕೈಗೆತ್ತಿಕೊಳ್ಳಲಾಗಿತ್ತು. ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ 22 ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ಗುರುತಿಸಲಾಗಿತ್ತು.  ಇದರಲ್ಲಿ 3 ಪ್ರಕರಣಗಳು ಇತ್ಯರ್ಥಗೊಂಡು ಸುಖಾಂತ್ಯ ಕಂಡಿವೆ. ಇದೊಂದು ದಾಖಲೆಯ ಮೈಲುಗಲ್ಲಾಗಿದೆ ಎಂದು ನ್ಯಾಯಾಧೀಶ ರೋಣ ವಾಸುದೇವ ಹೇಳಿದರು.

ಸೆಪ್ಟೆಂಬರ್ 14  ರಂದು ರಾಷ್ಟ್ರೀಯ ಲೋಕ ಅದಾಲತ್ :  ಮುಂಬರುವ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ಯಾವುದೇ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್,ನೀರು ಇತರೆ ಸೇವಾ ಶುಲ್ಕದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ.

ಇದರರೊಂದಿಗೆ ನ್ಯಾಯಾಲಯದ ವ್ಯಾಜ್ಯದಲ್ಲಿರುವ ನಾನ್ ಕಾಂಪೌಡಬಲ್ ಹಾಗೂ ಗಂಭೀರ ತರದ ಅಪರಾಧಿಕ ಪ್ರಕರಣಗಳನ್ನು ಹೊರತು ಪಡಿಸಿ, ಇತರೆ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು. ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಲೋಕ ಅದಾಲತ್‌ನಲ್ಲಿ ಭಾಗವಹಿಸಬಹುದು. ಸಾರ್ವಜನಿಕರು ಲೋಕ ಅದಾಲತ್ ಕುರಿತು ಹೆಚ್ಚಿನ‌ ಪ್ರಶ್ನೆ ಮತ್ತು ಮಾಹಿತಿಗಾಗಿ ಬೇಕಾದಲ್ಲಿ ಇ-ಮೇಲ್ dlsachitradurga2@gmail.com  ಹಾಗೂ ಸದಸ್ಯ ಕಾರ್ಯದರ್ಶಿಯವರ ಕಚೇರಿ ಮೊಬೈಲ್ ಸಂಖ್ಯೆ 9141193935 ಹಾಗೂ ದೂರವಾಣಿ ಸಂಖ್ಯೆ 08194- 222322 ಕ್ಕೆ ಸಹ ಸಂಪರ್ಕಿಸಬಹುದು ಎಂದು ನ್ಯಾಯಾಧೀಶ ರೋಣ ವಾಸುದೇವ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ  ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ವಿಜಯ್ ಉಪಸ್ಥಿತರಿದ್ದರು.

Advertisement
Tags :
bengaluruchitradurgaLok AdalatPrincipal District Judge Rona Vasudevasuddionesuddione newsSupreme Courtಇತ್ಯರ್ಥಚಿತ್ರದುರ್ಗಪ್ರಕರಣಗಳುಪ್ರಧಾನ ಜಿಲ್ಲಾ ನ್ಯಾಯಾಧೀಶಬೆಂಗಳೂರುಲೋಕ ಅದಾಲತ್ಸರ್ವೋಚ್ಛ ನ್ಯಾಯಾಲಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article