For the best experience, open
https://m.suddione.com
on your mobile browser.
Advertisement

ಸೆಪ್ಟೆಂಬರ್ 8 ರಂದು ಪತ್ರಿಕಾ ವಿತರಕರ 4 ನೇ ರಾಜ್ಯ ಮಟ್ಟದ ಸಮ್ಮೇಳನ : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ : ರಾಜ್ಯಾಧ್ಯಕ್ಷ ಶಂಭುಲಿಂಗ ಮಾಹಿತಿ...!

04:32 PM Sep 03, 2024 IST | suddionenews
ಸೆಪ್ಟೆಂಬರ್ 8 ರಂದು ಪತ್ರಿಕಾ ವಿತರಕರ 4 ನೇ ರಾಜ್ಯ ಮಟ್ಟದ ಸಮ್ಮೇಳನ   ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ   ರಾಜ್ಯಾಧ್ಯಕ್ಷ ಶಂಭುಲಿಂಗ ಮಾಹಿತಿ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆಪ್ಟೆಂಬರ್. 03 : ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕಾ ಹಂಚಿಕೆದಾರರ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 8 ರಂದು ನಗರದ ಅನುಭವ ಮಂಟಪದಲ್ಲಿ ಪತ್ರಿಕಾ ವಿತರಕರ 4 ನೇ ರಾಜ್ಯ ಮಟ್ಟದ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಶಂಭುಲಿಂಗ ತಿಳಿಸಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ಪತ್ರಿಕೆಗಳನ್ನು ನಾಲ್ಕನೇ ಅಂಗ ಎಂದು ಗುರುತಿಸಿದೆ ಆದರೆ ಮನೆ, ಮನೆಗೆ ಪತ್ರಿಕೆಗಳನ್ನು ವಿತರಣೆ ಮಾಡುವವರನ್ನು ನಿರ್ಲಕ್ಷ ಮಾಡಿದೆ. ನಮಗೆ ಯಾವುದೇ ರೀತಿಯ ಸೌಲಭ್ಯಗಳು ಸಿಕ್ಕಲ್ಲ ಕೋವಿಡ್ ಸಮಯದಲ್ಲಿ ಹಲವಾರು ತೊಂದರೆಗಳನ್ನು ಅನುಭವಿಸಿದ್ದು, ಹಲವಾರು ವಿತರಕರನ್ನು ಕಳೆದು ಕೊಳ್ಳಬೇಕಾಯಿತು. ಈ ಸಮಯದಲ್ಲಿ ಒಕ್ಕೂಟವನ್ನು ಮಾಡುವುದರ ಮೂಲಕ ನಮ್ಮ ಸಮಸ್ಯೆಗಳಿಗಾಗಿ ಹೋರಾಟವನ್ನು ಮಾಡಲಾಗುತ್ತಿದೆ, ಈಗ ಸರ್ಕಾರದಿಂದ ನಮಗೆ ಸ್ಪಂದನೆ ಸಿಕ್ಕಿದೆ ಈ ಶ್ರಮದಲ್ಲಿ ನಮಗೆ ಅರ್ಜಿ ಹಾಕಲು ಅನುಮತಿಯನ್ನು ನೀಡಲಾಗಿದೆ ಎಂದರು.

Advertisement

ನಮ್ಮ ಸಂಘಟನೆಯಿಂದ ತುಮಕೂರಲ್ಲಿ ಮೂರನೇ ಸಮ್ಮೇಳವನ್ನು ಮಾಡುವಾಗ ಸರ್ಕಾರ  ನಮಗೂ ಸಹಾ ರಾಜ್ಯೋತ್ಸವ ಪ್ರಶಸ್ತ್ರಿಯನ್ನು ನೀಡುವಂತೆ ಮನವಿ ಮಾಡಿದ್ದರ ಮೇರೆಗೆ ಈ ಸಾಲಿನಲ್ಲಿ ನಮ್ಮವರು ಒಬ್ಬರಿಗೆ ಪ್ರಶಸ್ತ್ರಿಯನ್ನು ನೀಡಿದ್ದಾರೆ. ಇದೇ ರೀತಿ ನಮ್ಮ ಕ್ಷೇಮಾಭೀವೃದ್ದಿಗಾಗಿ ಸರ್ಕಾರ 10 ಕೋಟಿ ರೂ.ಗಳನ್ನು ಮೀಸಲಿಡುವಂತೆ ಈ ಸಾಲಿನ ಸಮ್ಮೇಳನದಲ್ಲಿ ಸರ್ಕಾರವನ್ನು ಆಗ್ರಹಿಸಲಾಗುವುದಲ್ಲದೆ ನಮವರಿಗಾಗಿ ನೀಡುವ ರಾಜ್ಯೋತ್ಸವ ಪ್ರಶಸ್ತ್ರಿಯನ್ನು ಮುಂದುವರೆಸುವಂತೆ ಒತ್ತಾಯಿಸಲಾಗುವುದೆಂದರು.

ಸೆಪ್ಟೆಂಬರ್. 8 ರಂದು ನಡೆಯಲಿರುವ ಸಮ್ಮೇಳನದಲ್ಲಿ ಪತ್ರಿಕೆಯ ವಿತರಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಚರ್ಚಾ ಗೋಷ್ಟಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಕಾರ್ಮಿಕ ಸಚಿವರಾದ ಸಂತೋಷ ಲಾಡ್, ಸಂಸದರಾದ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಬಾಕರ್, ಜಿಲ್ಲೆಯ ಶಾಸಕರುಗಳು, ನಿಗಮ ಅಧ್ಯಕ್ಷರು, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಜಿಲ್ಲೆಯ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ಸುಮಾರು 40 ಸಾವಿರ ಪತ್ರಿಕಾ ವಿತರಕರು ಇದ್ದಾರೆ, ಇದರಲ್ಲಿ ಬೆಂಗಳೂರಿನಲ್ಲಿಯೇ 120 ಸ್ಥಳಗಳಲ್ಲಿ ಸುಮಾರು 6500 ಜನ ಪತ್ರಿಕೆಯನ್ನು ವಿತರಣೆ ಮಾಡುತ್ತಿದ್ದಾರೆ, ನಮ್ಮ ಒಕ್ಕೂಟದಲ್ಲಿ 3500 ಜನ ಸದಸ್ಯರಿದ್ದು ಚಿತ್ರದುರ್ಗ ಜಿಲ್ಲೆಯಲ್ಲಿ 500 ಜನ ಸದಸ್ಯರಿದ್ದಾರೆ. ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು 3000 ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಗೋಷ್ಟಿಯಲ್ಲಿ ಚಳ್ಳಕೆರೆ ತಾ.ಅಧ್ಯಕ್ಷ ಓಂಕಾರಪ್ಪ, ಜಿಲ್ಲಾ ಸಂಘದ ಕುಬೇಂದ್ರಪ್ಪ, ಮೊಳಕಾಲ್ಮೂರಿನ ಮಲ್ಲಿಕಾರ್ಜನ್, ಹಿರಿಯೂರಿನ ನಾಗಣ್ಣ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಾಸುದೇವ ನಾದೂರು ಸೇರಿದಂತೆ ಇತರರು ಭಾಗವಹಿಸಿದ್ದರು.

Tags :
Advertisement