For the best experience, open
https://m.suddione.com
on your mobile browser.
Advertisement

ತುರ್ತು ಪರಿಸ್ಥಿತಿಗೆ 50 ವರ್ಷ : ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

01:09 PM Jun 24, 2024 IST | suddionenews
ತುರ್ತು ಪರಿಸ್ಥಿತಿಗೆ 50 ವರ್ಷ   ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ. ಜೂ.24 : ದೇಶಕ್ಕೆ ಕಾಂಗ್ರೆಸ್ ಪಕ್ಷ ತುರ್ತು ಪರಿಸ್ಥಿತಿ ಹೇರಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂವಿಧಾನಕ್ಕೆ ಮಾಡಿದ ಅಪಮಾನ, ಇಂದಿರಾ ಗಾಂಧಿ ಮಾದ್ಯಮದವರಿಗೆ ನಿರ್ಭಂದ ಏರಿ ಪ್ರಜಾಪ್ರಭುತ್ವವನ್ನು ಧಮನ ಮಾಡಿದ್ದಾರೆ ಎಂದು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಜಿಲ್ಲಾ ಬಿಜೆಪಿ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ದ ಘೋಷಣೆಗಳನ್ನು ಕೂಗುತ್ತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

Advertisement
Advertisement


ಇಂದಿರಾ ಗಾಂಧಿ ಅಧಿಕಾರದಲ್ಲಿದ್ದಾಗ ದೇಶಕ್ಕೆ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ದೇಶದ ದಿಕ್ಕನ್ನು ತಪ್ಪಿಸಿದ್ದಾರೆ. ಅಲ್ಲದೆ, ಇದು ಸಂವಿಧಾನಕ್ಕೆ ಮಾಡಿದ ಅಪಮಾನ ಆಗಿದೆ. ಇದಲ್ಲದೆ ಇಂದಿರಾಗಾಂಧಿ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಮನಬಂದಂತೆ ಅಧಿಕಾರ ಚಲಾಯಿಸಿ ಜನರನ್ನು ದಯನೀಯ ಪರಿಸ್ಥಿತಿಗೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ ಒನಕೆ ಓಬವ್ವ ವೃತ್ತದಲ್ಲಿನ ಕಾಂಗ್ರೇಸ್ ಕಚೇರಿಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿತ್ತು.
ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿ ತಲುಪುವುದಕ್ಕೆ ಬಿಡದೆ ಅಡ್ಡಗಟ್ಟಿ, ಸುಮಾರು 15 ಕ್ಕಿಂತ ಹೆಚ್ಚು ಜನರನ್ನು ಬಂಧಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಜಿ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಬಸವರಾಜನ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುರೇಶ್, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ ಶಂಭು, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಮಲ್ಲಿಕಾರ್ಜನ.  ಅರುಣಕುಮಾರಿ, ಮಿನಾಕ್ಷಿ, ಮಂಜುಳಾ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

Advertisement
Tags :
Advertisement