ಬೆಳಗಾವಿಯಲ್ಲಿ ಎ.ಐ.ಸಿ.ಸಿ. ಅಧಿವೇಶನದ ಶತಮಾನೋತ್ಸವ : ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಮಕೃಷ್ಣ ಕರೆ
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 20 : ಇದೆ ತಿಂಗಳ 26, 27 ರಂದು ಬೆಳಗಾವಿಯಲ್ಲಿ ನಡೆಯುವ ಎ.ಐ.ಸಿ.ಸಿ. ಅಧಿವೇಶನದ ಶತಮಾನೋತ್ಸವಕ್ಕೆ ದೇಶದ ನಾನಾ ರಾಜ್ಯಗಳಿಂದ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರುಗಳು ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿರೋಧಿಗಳಿಗೆ ಶಕ್ತಿ ಪ್ರದರ್ಶಿಸುವಂತೆ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಚಿತ್ರದುರ್ಗ ಉಸ್ತುವಾರಿ ರಾಮಕೃಷ್ಣ ಕರೆ ನೀಡಿದರು.
ಎ.ಐ.ಸಿ.ಸಿ. ಅಧಿವೇಶನ ಶತಮಾನೋತ್ಸವದ ಅಂಗವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಮಹಾತ್ಮಗಾಂಧಿ 1924, ಡಿ. 26, 27 ರಂದು ಬೆಳಗಾವಿಯಲ್ಲಿ ಎ.ಐ.ಸಿ.ಸಿ. ಅಧಿವೇಶನ ನಡೆಸಿ ನೂರು ವರ್ಷಗಳಾಗಿರುವುದರಿಂದ ಶತಮಾನೋತ್ಸವವನ್ನು ಆಚರಿಸಲಾಗುವುದು. ಜಿಲ್ಲೆಯಿಂದ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಅಧಿವೇಶನಕ್ಕೆ ತೆರಳಬೇಕು. ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕಾಗಿರುವುದರಿಂದ ಸಂಘಟನೆಗೆ ಒತ್ತು ಕೊಡಬೇಕು. ಕೇಂದ್ರ ಗೃಹ ಸಚಿವ ಅಮಿತ್‍ಷಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ಗೆ ಅವಮಾನವಾಗುವಂತೆ ಹೇಳಿಕೆ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‍ಗೆ ಅಸಹ್ಯವಾಗಿ ಮಾತನಾಡಿ ಸ್ತೀಕುಲಕ್ಕೆ ಅವಮಾನಿಸಿರುವುದರ ವಿರುದ್ದ ಎಲ್ಲರು ಒಗ್ಗಟ್ಟಾಗಿ ಹೋರಾಡಬೇಕು. ಇವರಿಬ್ಬರನ್ನು ಪಕ್ಷದಿಂದ ವಜಾಗೊಳಿಸಬೇಕೆಂದು ಕೋಮುವಾದಿ ಬಿಜೆಪಿ.ಗೆ ಎಚ್ಚರಿಸಿದರು.
ಯುವ ಮುಖಂಡ ಜೆ.ಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡುತ್ತ ಮಹಾತ್ಮಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಎ.ಐ.ಸಿ.ಸಿ. ಅಧಿವೇಶನ ನಡೆದು ನೂರು ವರ್ಷಗಳಾಗಿರುವುದರಿಂದ ಡಿ.26, 27 ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಎ.ಐ.ಸಿ.ಸಿ. ಅಧಿವೇಶನದ ಶತಮಾನೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಜಿಲ್ಲೆಯಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಕೇಂದ್ರ ಗೃಹ ಸಚಿವ ಅಮಿತ್‍ಷಾ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರೇಳುವ ಬದಲು ದೇವರ ನಾಮಸ್ಮರಣೆ ಮಾಡಿ ಎಂದು ಅಹಂಕಾರದ ಹೇಳಿಕೆ ನೀಡಿ ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ. ಅದೇ ರೀತಿ ಸಿ.ಟಿ.ರವಿ ಲಕ್ಷ್ಮಿಹೆಬ್ಬಾಳ್ಕರ್ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಕೀಳು ಪದ ಬಳಸಿರುವುದನ್ನು ಯಾರು ಸಹಿಸುವುದಿಲ್ಲ. ಇವರಿಬ್ಬರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಸ್.ಜಯಣ್ಣ, ಹನುಮಲಿ ಷಣ್ಮುಖಪ್ಪ, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಮಂಜುನಾಥ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತನಂದಿನಿಗೌಡ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ, ನ್ಯಾಯವಾದಿ ಶಶಾಂಕ್, ಟಿ.ಸ್ವಾಮಿ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಗ್ಯಾರೆಂಟಿ ಅನುಷ್ಠಾನಗಳ ಸಮಿತಿ ಜಿಲ್ಲಾಧ್ಯಕ್ಷ ಆರ್.ಶಿವಣ್ಣ, ತಾಲ್ಲೂಕು ಅಧ್ಯಕ್ಷ ಆರ್.ಪ್ರಕಾಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಪ್ರಕಾಶ್‍ರಾಮನಾಯ್ಕ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಎ.ಜಾಕಿರ್‍ಹುಸೇನ್ ಇನ್ನು ಮುಂತಾದವರು ವೇದಿಕೆಯಲ್ಲಿದ್ದರು.