For the best experience, open
https://m.suddione.com
on your mobile browser.
Advertisement

ಈಡಿಗ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್ 22 ರಂದು ಒಂದು ದಿನದ ಉಪವಾಸ ಸತ್ಯಾಗ್ರಹ : ಸಿ.ತಿಪ್ಪೇಸ್ವಾಮಿ

07:07 PM Dec 18, 2023 IST | suddionenews
ಈಡಿಗ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್ 22 ರಂದು ಒಂದು ದಿನದ ಉಪವಾಸ ಸತ್ಯಾಗ್ರಹ   ಸಿ ತಿಪ್ಪೇಸ್ವಾಮಿ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ ಡಿಸೆಂಬರ್. 18:
ರಾಷ್ಟ್ರೀಯ ಈಡಿಗ ಮಹಾ ಮಂಡಳಿವತಿಯಿಂದ ಸಮಾಜದ ವಿವಿಧ ಬೇಡಿಕೆ ಈಡೇರಿಕೆಗಾಗಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈಡಿಗ ಸಮಾಜದ ಅಧ್ಯಕ್ಷರಾದ ಸಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

Advertisement

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದ ಮೇಲೆ ನಮ್ಮ ಸಮುದಾಯವನ್ನು ನಿರ್ಲಕ್ಷ ಮಾಡಿದೆ. ನಮ್ಮ ಸಮಾಜದ ಜನತೆಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಶಕ್ತಿಗೋಸ್ಕರ ಸಮಾಜದವರಲ್ಲಿ ಜಾಗೃತಿಯನ್ನು  ಮೂಡಿಸುವ ಸಲುವಾಗಿ ಉಪವಾಸ ಸತ್ಯಾಗ್ರಹವನ್ನು ಡಿ.22 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಮ್ಮ ಸಮಾಜದ ಗುರುಗಳಾದ ಶ್ರೀ ಪ್ರಣವಾನಂದ ಶ್ರೀಗಳ ಸಮ್ಮುಖದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಕಳೆದ ಬಾರಿ ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಮ್ಮ ಸಮುದಾಯದ ಬಗ್ಗೆ ಬರೀ ಭಾಷಣವನ್ನು ಮಾಡಿದರೇ ವಿನಹ ಯಾವುದೇ ರೀತಿಯ ಆರ್ಥಿಕ ಸಹಾಯವನ್ನು ಮಾಡುವ ಬಗ್ಗೆ ಭರವಸೆಯನ್ನು ಸಹಾ ನೀಡಲಿಲ್ಲ, ಇದರಿಂದ ಈಡಿಗ ಸಮಾಜಕ್ಕೆ ಪ್ರತಿ ಬಾರಿಯೂ ಅನ್ಯಾಯವಾಗುತ್ತಿದೆ. ಚುನಾವಣೆಯ ಕಾಂಗ್ರೆಸ್ ಪ್ರನಾಳಿಕೆಯಲ್ಲಿ ನಾರಾಯಣ ನಿಗಮಕ್ಕೆ 250 ಕೋಟಿ ರೂ.ಗಳನ್ನು ನೀಡುವುದಾಗಿ ಹೇಳಿದ್ದರು ಆದರೆ ಇಲ್ಲಿಯವರೆಗೂ ಸರ್ಕಾರದಿಂದ ಯಾವುದೇ ರೀತಿಯ ಅನುಕೂಲಗಳು ಬಂದಿಲ್ಲ ಎಂದು ತಿಪ್ಪೇಸ್ವಾಮಿ ದೂರಿದರು.

ಈ ಹಿನ್ನಲೆಯಲ್ಲಿ ಡಿ.22 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾಜದ ಗುರುಗಳಾದ ಶ್ರೀ ಪ್ರಣವಾನಂದ ಶ್ರೀಗಳು ನೇತೃತ್ವವನ್ನು ವಹಿಸಲಿದ್ದಾರೆ. ಅಂದಿನ ಈ ಕಾರ್ಯಕ್ರಮಕ್ಕೆ ಈಡಿಗ ಸಮಾಜದ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದುದರ ಮೂಲಕ ಸತ್ಯಾಗ್ರಹವನ್ನು ಯಶಸ್ವಿ ಮಾಡುವಂತೆ ಮನವಿ ಮಾಡಿದ್ದಾರೆ.

ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನು, ಜಿಲ್ಲಾ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಉಮಾದೇವಿ, ಜಿಲ್ಲಾ ಉಪಾಧ್ಯಕ್ಷರಾದ ರಮೇಶ್, ಮುಖಂಡರಾದ ಶ್ರೀನಿವಾಸ್, ಪ್ರಕಾಶ್ ಭಾಗವಹಿಸಿದ್ದರು.

Advertisement
Tags :
Advertisement