ಡಿಸೆಂಬರ್ 06 ರಂದು ಚಿತ್ರದುರ್ಗದಲ್ಲಿ ಶಿಕ್ಷಣದಲ್ಲಿ ರಂಗಕಲೆ ಕುರಿತು ಒಂದು ದಿನದ ಕಾರ್ಯಾಗಾರ
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.04 : ನಗರದ ಪೀಳೆಕೆರನಹಳ್ಳಿಯ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಿಸೆಂಬರ್ 6 ರ ಬುಧವಾರ ಬೆಳಗ್ಗೆ 10.30ಕ್ಕೆ ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶಿಕ್ಷಣದಲ್ಲಿ ರಂಗಕಲೆ ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಉದ್ಧಾಟಿಸುವರು. ಶರಣ ಸಾಹಿತ್ಯ ಪರೀಷತ್ ಅಧ್ಯಕ್ಷರಾದ ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಕಲಾ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಯಶೋಧರ.ಜಿ.ಎನ್ ಅವರು ಶಿಕ್ಷಣದಲ್ಲಿ ರಂಗಕಲೆ ಕುರಿತು ಉಪನ್ಯಾಸ ನೀಡುವರು. ಉಪನ್ಯಾಸಕ ಹಾಗೂ ರಂಗಕರ್ಮಿ ಸಿ.ಪಿ.ಜ್ಞಾನದೇವ ಅವರು ಶಿಕ್ಷಕರಿಗೆ ರಂಗಾಂಭಿನಯ ಕುರಿತು ತರಬೇತಿ ನೀಡುವರು. ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಶ್ರೀಮತಿ ಜಯಲಕ್ಷ್ಮೀ ಉಪಸ್ಥಿತರಿರುವರು ಎಂದು ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಅಧ್ಯಕ್ಷ ಪ್ರಕಾಶ್ ಬಾದರದಿನ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.