Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

06:51 PM Jun 21, 2024 IST | suddionenews
Advertisement

ಚಿತ್ರದುರ್ಗ. ಜೂನ್.21:  ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ ಶೇ.75ಕ್ಕಿಂತಲೂ ಹೆಚ್ಚು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

 

ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪಹಣಿ ಆಧಾರ್ ಜೋಡಣೆ ಹಾಲಿ ಶೇ.48ರಷ್ಟು ಪ್ರಗತಿ ಸಾಧಿಸಲಾಗಿದ್ದು, ತಿಂಗಳಾಂತ್ಯದೊಳಗೆ ಶೇ.75ಕ್ಕಿಂತಲೂ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸೂಚಿಸಿದ ಅವರು, ಈ ನಿಟ್ಟಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಅಗತ್ಯ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.
ಸರ್ಕಾರಿ ಆಸ್ತಿ ಸಂಗ್ರಹಿಸಲು ಡಿಜಿಟಲ್ ಪೆನ್ಸಿಂಗ್ ಪೂರೈಸಲು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಭೂಮಿ ರ್ಯಾಂಕಿಂಗ್‍ನಲ್ಲಿ ಉತ್ತಮ ಪ್ರಗತಿ ಸಾಧಿಸಬೇಕು. ಹಕ್ಕು ಬದಲಾವಣೆ ಪ್ರಕರಣಗಳನ್ನು ಕಾಲಮಿತಿಯಲ್ಲಿ ಪೂರೈಸಬೇಕು ಎಂದು ಹೇಳಿದರು.

Advertisement

ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುವ ಎಲ್ಲಾ ಫಲಾನುಭವಿಗಳಿಗೆ ಎನ್‍ಪಿಸಿ ಮ್ಯಾಪಿಂಗ್ ಹಾಗೂ ಆಧಾರ್ ಜೋಡಣೆಯನ್ನು ಶೇ.100ರಷ್ಟು ಪ್ರಗತಿ ಸಾಧಿಸಬೇಕು. ಬಾಕಿ ಇರುವ ಪ್ರಕರಣಗಳನ್ನು ಆದ್ಯತೆ ಮೇರೆಗೆ ಕ್ರಮವಹಿಸಲು ಸೂಚಿಸಿದರು.

ಸಭೆಯಲ್ಲಿ ಗ್ರೇಡ್-2 ತಹಶೀಲ್ದಾರ್ ಕೃಷ್ಣಪ್ಪ, ಉಪ ತಹಶೀಲ್ದಾರ್‍ಗಳು, ಶಿರಸ್ತೆದಾರರು, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಇದ್ದರು. ಹಿರಿಯೂರು ನಗರಸಭೆ ಪ್ರಗತಿ ಪರಿಶೀಲನಾ ಸಭೆ: ಕುಡಿಯುವ ನೀರು ಕಲುಷಿತವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಯಮಿತವಾಗಿ ಕುಡಿಯುವ ನೀರನ್ನು ಪರೀಕ್ಷೆ ಮಾಡಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.

ಸ್ವಚ್ಛತೆ, ನೀರು ಸರಬರಾಜು, ಬೀದಿದೀಪಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಂದ ದೂರುಗಳು ಬಾರದಂತೆ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ನಗರಸಭೆ ವ್ಯಾಪ್ತಿಯ 15ನೇ ಹಣಕಾಸು ಯೋಜನೆ, ಸ್ವಚ್ಛ ಭಾರತ್ ಮಿಷನ್ 1 ಮತ್ತು 2 ಸೇರಿದಂತೆ ವಿವಿಧ ಯೋಜನೆಗಳ ಕುರಿತು ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

 

Advertisement
Tags :
Aadhaar Linking to Pahanibengaluruchitradurgadc T.Venkateshmore than 75% progresssuddionesuddione newsಚಿತ್ರದುರ್ಗಜಿಲ್ಲಾಧಿಕಾರಿ ಟಿ.ವೆಂಕಟೇಶ್ಪಹಣಿಗೆ ಆಧಾರ್ ಜೋಡಣಿಬೆಂಗಳೂರುಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article