Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಸಮಾನವಾಗಿ ಸ್ವೀಕರಿಸಿ : ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

05:23 PM Sep 26, 2024 IST | suddionenews
Advertisement

 

Advertisement

ಚಿತ್ರದುರ್ಗ. ಸೆ.26: ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಉತ್ತಮವಾಗಿ ತಮ್ಮ ಸಾಮರ್ಥ್ಯಗಳನ್ನು ಹೊರಹಾಕುವ ಮೂಲಕ ಮುಂದಿನ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ನಮ್ಮ ಜಿಲ್ಲೆಯನ್ನು ಪ್ರತಿನಿಧಿಸಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಗೆದ್ದಾಗ ಗೆಲುವನ್ನು ಯಾವ ರೀತಿ ಸ್ವೀಕರಿಸುವಿರೋ, ಸೋತಾಗಲೂ ಕೂಡ ಅದೇ ಮನಸ್ಥಿತಿಯಲ್ಲಿ ಸ್ವೀಕರಿಸಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕ್ರೀಡಾಪಟುಗಳಿಗೆ ಸಲಹೆ ನೀಡಿದರು.

ಜಿಲ್ಲಾಡಾಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಬೆಂಗಳೂರು ಹಾಗೂ ಜಿಲ್ಲೆಯ ವಿವಿಧ ಕ್ರೀಡಾ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಕ್ರೀಡಾಪಟುಗಳು ಈ ಕೂಟದಲ್ಲಿ ಜಯಗಳಿಸಿ ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸಿದಾಗ ನಿಮ್ಮ ಹೆಸರನಿಂದ ಗುರುತಿಸದೇ, ಚಿತ್ರದುರ್ಗ ಜಿಲ್ಲೆಯಿಂದ ಪ್ರತಿನಿಧಿಸಿದ್ದೀರಿ ಎಂದು ಗುರುತಿಸಲಾಗುತ್ತದೆ. ಆದ್ದರಿಂದ ನಿಮ್ಮ ವರ್ತನೆಗಳೂ ಸಹ ಜಿಲ್ಲೆಯ ಗೌರವವನ್ನು ಕಾಪಾಡುತ್ತವೆ. ಈ ಜವಾಬ್ದಾರಿ ಕ್ರೀಡಾಪಟುಗಳ ಮೇಲಿದೆ. ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಗೌರವಯುತವಾಗಿ ನಿಭಾಯಿಸಿ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟಿçÃಯ ಮಟ್ಟದಲ್ಲಿ ಜಿಲ್ಲೆಯಿಂದ ಪ್ರತಿನಿಧಿಸಿ ಹೆಚ್ಚಿನ ಪದಕಗಳನ್ನು ತರಬೇಕೆಂದು ಆಶಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳಿಗೆ ಬೇಕಾಗುವ ಎಲ್ಲಾ ರೀತಿಯ ಸುಸಜ್ಜಿತ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ನೀಡಿದರು.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಾಲಿಬಾಲ್, ಫುಟ್ಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟ್‌ಬಾಲ್, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್‌ಬ್ಯಾಂಡ್ಮಿಂಟನ್, ಯೋಗ ಸೇರಿದಂತೆ ವಿವಿಧ ಅಥ್ಲೆಟಿಕ್ಸ್ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸಚೇತಾ ಎಂ ನೆಲವಿಗಿ, ಮೆದೇಹಳ್ಳಿ ಗ್ರಾಂ.ಪಂ, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಿಜಯ್, ಸೇರಿದಂತೆ ಜಿಲ್ಲೆಯ 6 ತಾಲ್ಲೂಕಿನ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನದಲ್ಲಿ ವಿಜೇತರಾದ ಮಹಿಳಾ, ಪುರುಷ ಮತ್ತು ಹಿರಿಯ ಕ್ರೀಡಾ ಪಟುಗಳು ಭಾಗವಹಿಸಿದ್ದರು.

Advertisement
Tags :
acceptbengaluruchitradurgadefeatMLA K.C.Virendra Pappisportssuddionesuddione newsvictoryಕ್ರೀಡೆಚಿತ್ರದುರ್ಗಬೆಂಗಳೂರುಶಾಸಕ ಕೆ.ಸಿ.ವೀರೇಂದ್ರ ಪಪ್ಪಿಸಹಜಸುದ್ದಿಒನ್ಸುದ್ದಿಒನ್ ನ್ಯೂಸ್ಸೋಲು ಗೆಲುವು
Advertisement
Next Article