Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕೊಲ್ಕತ್ತಾದ ಕಾಲೇಜಿನಲ್ಲಿ ವೈದ್ಯರ ಮೇಲೆ ಅತ್ಯಾಚಾರ, ಕೊಲೆ : ಎಐಡಿವೈಓ ಖಂಡನೆ

05:54 PM Aug 19, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ.19:  ಕೊಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿಯ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಅಪರ ಜಿಲ್ಲಾಧಿಕಾರಿಗಳ ಮೂಲಕ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‍ಎಸ್) ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಜನ ಸಂಘಟನೆ(ಎಐಡಿವೈಓ) ಚಿತ್ರದುರ್ಗ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

Advertisement

ಕೊಲ್ಕತ್ತಾದ ಆರ್‍ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘಟನೆಯು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಪೈಶಾಚಿಕ ಅತ್ಯಾಚಾರ, ಕೊಲೆಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿಯನ್ನು ಎಐಎಂಎಸ್‍ಎಸ್  ಮತ್ತು  ಎಐಡಿವೈಒ ಚಿತ್ರದುರ್ಗ ಜಿಲ್ಲಾ ಘಟಕಗಳು ಅತ್ಯುಗ್ರವಾಗಿ ಖಂಡಿಸುತ್ತವೆ.

ಆಗಸ್ಟ್ 08 ರಂದು ರಾತ್ರಿ ಪಾಳಿಯಲ್ಲಿ ಕೆಲಸದಲ್ಲಿದ್ದ 32 ವರ್ಷದ ಟ್ರೈನಿ ವೈದ್ಯೆಯ ಮೃತ ದೇಹವು ಶುಕ್ರವಾರ ಬೆಳಗ್ಗೆ ಕಾಲೇಜಿನ ಮೂರನೇ ಮಹಡಿಯ ಸೆಮಿನಾರ್ ಹಾಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ದೇಶದ ನಾಗರಿಕರಲ್ಲಿ ತೀವ್ರವಾದ ಆತಂಕ, ಗಾಬರಿ ಮತ್ತು ಆಘಾತವನ್ನುಉಂಟು ಮಾಡಿದೆ. ಜನರ ಜೀವವನ್ನು ರಕ್ಷಿಸಬೇಕಾದ ವೈದ್ಯರಿಗೇ ರಕ್ಷಣೆ ಇಲ್ಲದಂತಾಗಿರುವುದು ಅತ್ಯಂತ ಹೇಯಕೃತ್ಯವಾಗಿದೆ. ಅಲ್ಲದೆ ದೇಶದಾದ್ಯಂತ ಜನರು ಈಘಟನೆಯನ್ನು ಖಂಡಿಸಿ ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.

ಕೆಲಸದ ಸ್ಥಳಗಳಲ್ಲಿ ಮಹಿಳೆಯ ಸುರಕ್ಷತೆಯ ಬಗ್ಗೆ ಜನರು ಚರ್ಚಿಸುವಂತಾಗಿದೆ. ವೈದ್ಯ ವಿದ್ಯಾರ್ಥಿನಿಯ ಮೇಲಾದ ಕೃತ್ಯದ ವಿರುದ್ಧ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ಏಕಾಏಕಿ ಸಮಾಜಘಾತುಕ ಶಕ್ತಿಗಳು ದಾಳಿ ಮಾಡಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ಮತ್ತು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಮತ್ತು ಪ್ರತಿಭಟನಾಕಾರರ ಮನಸ್ಸಿನಲ್ಲಿ ಭಯದ ಭಾವನೆಯನ್ನು ಹುಟ್ಟಿಸಲು ಮಧ್ಯರಾತ್ರಿ ಆರ್‍ಜಿಕರ್ ವೈದ್ಯಕೀಯ ಕಾಲೇಜಿಗೆ ನುಗ್ಗಿ ಪ್ರತಿಭಟನೆಯ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ.

ಈ ಕೃತ್ಯ ಎಸಗಿರುವ ಅಪರಾಧಿಗಳನ್ನು ರಕ್ಷಿಸಲು ಗೂಂಡಾಗಳು ನಡೆಸಿರುವ ಈ ಉದ್ದೇಶಪೂರ್ವಕ ಮತ್ತು ವ್ಯವಸ್ಥಿತ ದಾಳಿಯನ್ನು ಖಂಡಿಸಿದ್ದು ಆಸ್ಪತ್ರೆಯ ಅಧಿಕಾರಿಗಳು ಸಹ ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿಲ್ಲ. ಬದಲಾಗಿ ಅಪರಾಧಿಗಳೊಂದಿಗೆ ಶಾಮೀಲಾಗಿದ್ದು ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಂತೆ ಕಾಣುತ್ತಿದೆ.

ಗೂಂಡಾಗಳ ಇಂತಹ ಕೃತ್ಯಗಳು ಅಪರಾಧ ಎಸಗಿದವರಿಗೆ ಮಾತ್ರ ಸಹಾಯ ಮಾಡುತ್ತವೆ ಮತ್ತು ನಿಜವಾದ ಪ್ರತಿಭಟನಾಕಾರರನ್ನು ಸಮಾಜ ವಿರೋಧಿಗಳೆಂದು ಬಿಂಬಿಸುವ ಮತ್ತು ಚಳವಳಿಯನ್ನು ಹತ್ತಿಕ್ಕುವ ಕೈಗಳನ್ನು ಬಲಪಡಿಸುತ್ತವೆ. ಆದ್ದರಿಂದ ತಾವುಗಳು ಈ ಕುರಿತು ಕೂಡಲೆ ಮಧ್ಯೆ ಪ್ರವೇಶಿಸಿ ಸಂತ್ರಸ್ತೆಗೆ ನ್ಯಾಯ ಸಿಗುವಂತಾಗಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಎಐಎಂಎಸ್‍ಎಸ್ ಮತ್ತು ಎಐಡಿವೈಒ ಚಿತ್ರದುರ್ಗ ಜಿಲ್ಲಾ ಘಟಕಗಳು ಮನವಿ ಮಾಡಿವೆ.

ಈ ಸಂದರ್ಭದಲ್ಲಿ ಎಐಎಂಎಸ್‍ಎಸ್‍ನ ಜಿಲ್ಲಾ ಸಂಚಾಲಕರಾದ ಶ್ರೀಮತಿ ಸುಜಾತ, ಎಐಡಿವೈಒನ ಜಿಲ್ಲಾ ಮುಖಂಡರಾದ ಡಿ.ಕೆ. ಜಯ್ಯಣ್ಣ, ಕುಮುದ, ರವಿಕುಮಾರ್ ಉಪಸ್ಥಿತರಿದ್ದರು.

Advertisement
Tags :
AIDYObengaluruchitradurgacondemns rapedoctor Kolkata collegemurdersuddionesuddione newsಅತ್ಯಾಚಾರಎಐಡಿವೈಓ ಖಂಡನೆಕಾಲೇಜುಕೊಲೆಕೊಲ್ಕತ್ತಾಚಿತ್ರದುರ್ಗಬೆಂಗಳೂರುವೈದ್ಯರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article