Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

03:00 PM Dec 22, 2023 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 22 :  2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಮಾಡಿತು.

Advertisement

ರಾಜ್ಯದಲ್ಲಿ ಬಡ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಅಪಾಯಕಾರಿ, ಅಸುರಕ್ಷಿತ,ಹಾಗೂ ಅಸಂಘಟಿತ ವಲಯದಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಮತ್ತು ಅವರ ಕುಟುಂಬದ ರಕ್ಷಣೆಗಾಗಿ ಸರಕಾರಗಳು ಬದ್ಧವಾಗಿರಬೇಕು, ಆದರೆ ರಾಜ್ಯ ಸರಕಾರ 2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆ ಕಾರ್ಯಕ್ರಮವನ್ನು ನವಂಬರ್ 09 ರಂದು ಮಾಡಿದೆ ಆದರೆ ಇಲ್ಲಿಯವರೆಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಜಮೆ ಆಗದೆ ಬಡ ವಿದ್ಯಾರ್ಥಿಗಳ ಜೀವನದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿರುವುದು ಖಂಡನೀಯ ಎಂದಿದ್ದಾರೆ.

ಎಲ್ಲ ಕಾರ್ಮಿಕರನ್ನು ನೋಂದಣಿ ಮಾಡಿಸಿಕೊಂಡಿದ್ದ ಹಿಂದಿನ ಸರ್ಕಾರ ಎಲ್ಲರಿಗೂ ಸಹಾಯ ಹಸ್ತವನ್ನುಚಾಚಿತ್ತು. ಜೊತೆಗೆ, ಎಲ್ಲ ಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತೆ ಹಿಂದೆ ಇದ್ದ ವಿದ್ಯಾರ್ಥಿವೇತನಕ್ಕಿಂತ ಶೇ.50 ರಷ್ಟು ಸಹಾಯಧನ ಹೆಚ್ಚಳ ಮಾಡಿತ್ತು. ಆದರೆ, ಇಂದಿನ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕ ಇಲಾಖೆಯಲ್ಲಿ ಹಣವಿಲ್ಲವೆಂದು ನೆಪವೊಡ್ಡಿ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನದ ಶೇ.60 ಮೊತ್ತವನ್ನು ಕಡಿತಗೊಳಿಸಿ ಆದೇಶ ಹೊರಡಿಸಿರುವ ಸರಕಾರದ ನಡೆಯನ್ನು ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ.

2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ತಕ್ಷಣ ಜಮೆ ಮಾಡಬೇಕು, ಯಾವುದೇ ರೀತಿ ಕಡಿತ ಮಾಡದೆ ಪೂರ್ಣ ವಿದ್ಯಾರ್ಥಿ ವೇತನವನ್ನು ನೀಡಬೇಕು. ವಿದ್ಯಾರ್ಥಿ ವೇತನಕ್ಕೆ ಸಲ್ಲಿಕೆ ಮಾಡಿದ್ದ 4 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದನ್ನು ರದ್ದುಗೊಳಿಸಿರುವ ಸರಕಾರ ಎಲ್ಲರಿಗೂ ವಿದ್ಯಾರ್ಥಿ ವೇತನ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕರಣಿ ಸದಸ್ಯರಾದ ಸುದರ್ಶನ್‍ನಾಯ್ಕ್, ಕನಕರಾಜ್ ಕೋಡಿಹಳ್ಳಿ, ಜಿಲ್ಲಾ ಸಂಚಾಲಕರು ಸಿದ್ದೇಶ್, ನಗರ ಕಾರ್ಯದರ್ಶಿ ಗೋಪಿ, ಸಾಮಾಜಿಕ ಜಾಲತಾಣ ಚಿತ್ರಸ್ವಾಮಿ, ಮಹಿಳಾ ಪ್ರಮುಖ ಚೈತ್ರಾ, ಕಾರ್ಯಕರ್ತರು ದರ್ಶನ್, ಸುದೀಪ್, ಮಧು, ಅಜಯ್, ಉಪಸ್ಥಿತರಿದ್ದರು.

Advertisement
Tags :
Akhil Bharatiya Vidyarthi ParishadchitradurgaProteststate governmentಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ಚಿತ್ರದುರ್ಗಪ್ರತಿಭಟನೆರಾಜ್ಯ ಸರ್ಕಾರಸುದ್ದಿಒನ್
Advertisement
Next Article