Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮ್ಯಾನೇಜ್‍ಮೆಂಟ್ ಕೋಟಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒತ್ತಾಯ

02:45 PM Feb 19, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 19 : 2023-24 ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‍ಗಳಿಗೆ ಮ್ಯಾನೇಜ್‍ಮೆಂಟ್ ಕೋಟಾದಡಿಯಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒತ್ತಾಯಿಸಿದೆ.

Advertisement

ನಗರದಲ್ಲಿಂದು ಪ್ರತಿಭಟನೆಯನ್ನು ನಡೆಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ ಈಗಾಗಲೇ 2023-24ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‍ಗಳಿಗೆ ಮ್ಯಾನೇಜ್‍ಮೆಂಟ್ ಕೋಟಾದಡಿಯಲ್ಲಿ ಪ್ರವೇಶಾತಿ ಕೊಡದೆ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಹೊರಡಿಸಿರುವಂತಹ ಮ್ಯಾನೇಜ್‍ಮೆಂಟ್ ಕೋಟಾದಡಿಯಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ನೀಡುವುದಿಲ್ಲವೆಂದು ಆದೇಶವನ್ನು ಹಿಂಪಡೆದು, ಮ್ಯಾನೇಜ್‍ಮೆಂಟ್ ಕೋಟಾದಡಿಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ನೀಡಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳನ್ನು  ಮತ್ತು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರು, ಕನಕರಾಜ್.ಆರ್ ಕೋಡಿಹಳ್ಳಿ, ನಗರ ಕಾರ್ಯದರ್ಶಿ ಗೋಪಿ, ಕಾರ್ಯಕರ್ತರಾದ ಯುವರಾಜ್ ಹೆಗಡೆ, ದಾನೇಶ್.ಬಿ, ಅಜಯ್, ಹನುಮಂತ, ಚಿದಾನಂದ, ಅಜಯ್‍ಕುಮಾರ್, ಮಣಿಕಂಠ, ರಮೇಶ್ ಇನ್ನು ಉಪಸ್ಥಿತರಿದ್ದರು.

Advertisement
Tags :
admissionAkhil Bharatiya Vidyarthi Parishadchitradurgahostelsmanagement quotastudentssuddionesuddione newsurgesಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ಒತ್ತಾಯಕೋಟಾಚಿತ್ರದುರ್ಗಪ್ರವೇಶಮ್ಯಾನೇಜ್‍ಮೆಂಟ್ವಿದ್ಯಾರ್ಥಿ ನಿಲಯವಿದ್ಯಾರ್ಥಿಗಳುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article