ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರಿಂದ ಜಿಲ್ಲಾಸ್ಪತ್ರೆಗೆ ಅಂಬ್ಯುಲೆನ್ಸ್ ಹಸ್ತಾಂತರ
05:38 PM Dec 03, 2024 IST | suddionenews
ಚಿತ್ರದುರ್ಗ. ಡಿ.03: ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಂಗಳವಾರ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರು ಅಂಬ್ಯುಲೆನ್ ಸೇವೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
Advertisement
ಹೊಳಲ್ಕೆರೆ ಶಾಸಕರಾದ ಎಂ.ಚಂದ್ರಪ್ಪ ಅವರು ಶಾಸಕರ ನಿಧಿಯಿಂದ ರೂ.30 ಲಕ್ಷ ವೆಚ್ಚದ ಒಂದು ಅಂಬ್ಯುಲೆನ್ಸ್‍ನ್ನು ಜಿಲ್ಲಾಸ್ಪತ್ರೆಗೆ ನೀಡಿದ್ದು, ಅಂಬ್ಯುಲೆನ್ಸ್‍ನ್ನು ವಾಹನವನ್ನು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರಿಗೆ ಶಾಸಕ ಎಂ.ಚಂದ್ರಪ್ಪ ಅವರು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ 40 ಹಾಸಿಗೆಗಳ ವಾರ್ಡ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಸೇರಿದಂತೆ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
Advertisement