Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶಿಕ್ಷಕರ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಮಧು ಬಂಗಾರಪ್ಪನವರಿಗೆ ಮನವಿ

05:03 PM Dec 15, 2023 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್.15 : ಬೆಳಗಾವಿಯ ಸುವರ್ಣ ಸೌಧದಲ್ಲಿ ಹತ್ತು ದಿನಗಳ ಕಾಲ ನಡೆದ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪನವರನ್ನು ಭೇಟಿ ಮಾಡಿ ರಾಜ್ಯದ 33 ಜಿಲ್ಲೆಗಳಲ್ಲಿ ಖಾಲಿಯಿರುವ ವೃತ್ತಿ ಶಿಕ್ಷಣ ವಿಷಯ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡುವುದು, ಜಿಲ್ಲಾ ಹಂತದಲ್ಲಿ ವೃತ್ತಿ ಶಿಕ್ಷಣ ಶಿಕ್ಷಕರು ಗ್ರೇಡ್-2, ವೃತ್ತಿ ಶಿಕ್ಷಣ ಶಿಕ್ಷಕರ ಜೇಷ್ಟತಾ ಪಟ್ಟಿ ಸಿದ್ದಪಡಿಸುವುದು. ಜೇಷ್ಠತೆ ಹಾಗೂ ರೋಸ್ಟರ್ ಪ್ರಕಾರ ಗೈಡ್-1 ವೃತ್ತಿ ಶಿಕ್ಷಣ ಶಿಕ್ಷಕರ ಹುದ್ದೆಗೆ ಬಡ್ತಿ, ವೇತನ ತಾರತಮ್ಯ ನಿವಾರಿಸುವಂತೆ ಮನವಿ ಸಲ್ಲಿಸಲಾಯಿತು.

Advertisement

ಮನವಿ ಸ್ವೀಕರಿಸಿದ ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ.ಬಿ.ಕಾವೇರಿ ಈ ಸಂದರ್ಭದಲ್ಲಿದ್ದರು.

ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಗೌರವಾಧ್ಯಕ್ಷ ಬಿ.ಎನ್.ರಾಮರೆಡ್ಡಿ, ಎಸ್.ವಾಸು, ಚಿತ್ರದುರ್ಗ ಡಿ.ಡಿ.ಪಿ.ಐ. ಕಚೇರಿಯ ವಿಷಯ ಪರಿವೀಕ್ಷಕ ಎಸ್.ಟಿ.ಮಹಾಲಿಂಗಪ್ಪ, ಬತುಲ್ ಅಕ್ಬರ್, ಕೆ.ಎಚ್.ಎಂ.ವಿಶ್ವನಾಥ, ನಾಗಪ್ಪ, ಸೋಮಣ್ಣನವರ್, ಜಿ.ಎಸ್.ನರೇಗಲ್, ಶ್ರೀಮತಿ ಯು.ಟಿ.ಉಂಡೆಕಾರ್ ಇನ್ನು ಮುಂತಾದವರು ಹಾಜರಿದ್ದರು.

Advertisement
Tags :
chitradurgaಚಿತ್ರದುರ್ಗಮನವಿವಿವಿಧ ಬೇಡಿಕೆಶಿಕ್ಷಕರ ಸಂಘಸಚಿವ ಮಧು ಬಂಗಾರಪ್ಪ
Advertisement
Next Article