Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ : ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ

03:08 PM Aug 28, 2024 IST | suddionenews
Advertisement

ಚಿತ್ರದುರ್ಗ. ಆ.28: 2024-25ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Advertisement

ಕೃಷಿ ಇಲಾಖೆಯ ಕೆ.ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆ ಅಳವಡಿಸಲಾಗಿರುತ್ತದೆ. ಸಿಟಿಜನ್ ಲಾಗಿನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾ ಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೆ.ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಎಫ್‌ಐಡಿ, ಫಹಣಿ, ಆಧಾರ್ ಕಾರ್ಡ್, ಫೋಟೋ, ಜಾತಿ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್‌ಬುಕ್ ಪ್ರತಿಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಚಿತ್ರದುರ್ಗ ಜಿಲ್ಲಾ ಮಟ್ಟಕ್ಕೆ ಶೇಂಗಾ (ಮಳೆಯಾಶ್ರಿತ), ಚಿತ್ರದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕು ಮಟ್ಟಕ್ಕೆ ಮುಸುಕಿನ ಜೋಳ (ಮಳೆ ಆಶ್ರಿತ), ಹೊಸದುರ್ಗ ತಾಲ್ಲೂಕು ಮಟ್ಟಕ್ಕೆ ರಾಗಿ (ಮಳೆ ಆಶ್ರಿತ) ಹಾಗೂ ಚಳ್ಳಕೆರೆ, ಹಿರಿಯೂರು ಮತ್ತು ಮೊಳಕಾಲ್ಲೂರು ತಾಲ್ಲೂಕು ಮಟ್ಟಕ್ಕೆ ಶೇಂಗಾ (ಮಳೆ ಆಶ್ರಿತ) ಬೆಳೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Advertisement

ಜಿಲ್ಲಾ ಮಟ್ಟದ ಕೃಷಿ ಪ್ರಶಸ್ತಿಗೆ, ಪ್ರಥಮ ರೂ.30000, ದ್ವಿತೀಯ ರೂ.25000, ತೃತೀಯ ರೂ.20000 ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಗೆ ಪ್ರಥಮ ರೂ.15000, ದ್ವಿತೀಯ ರೂ.10000 ಮತ್ತು ತೃತೀಯ ರೂ.5000 ಇರುವುದರಿಂದ ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು. ಪ್ರಸಕ್ತ ಸಾಲಿನಿಂದ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಶುಲ್ಕ ರದ್ದುಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Advertisement
Tags :
Application InvitationbengaluruchitradurgaCrop Competitionlast date for applicationsuddionesuddione newsಅರ್ಜಿ ಆಹ್ವಾನಚಿತ್ರದುರ್ಗಬೆಂಗಳೂರುಬೆಳೆ ಸ್ಪರ್ಧೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article