For the best experience, open
https://m.suddione.com
on your mobile browser.
Advertisement

ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆಗಾಗಿ ಅರ್ಜಿ ಆಹ್ವಾನ

06:01 PM Nov 29, 2024 IST | suddionenews
ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆಗಾಗಿ ಅರ್ಜಿ ಆಹ್ವಾನ
Advertisement

ಚಿತ್ರದುರ್ಗ. ನ.29:2024-25ನೇ ಸಾಲಿಗೆ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20ರಂತೆ ಕೋಳಿ ಮರಿಗಳನ್ನು ವಿತರಿಸಿ ಆದಾಯ ಹೆಚ್ಚಿಸುವ ಕಾರ್ಯಕ್ರಮ ಅನುಷ್ಟಾನಗೊಳಿಸುತ್ತಿದ್ದು, ಈ ಸಂಬಂಧ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ.

Advertisement

ರೈತ ಮಹಿಳೆಯರು, ಸ್ವ-ಸಹಾಯ ಗುಂಪಿನ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘಗಳಲ್ಲಿರುವ ಮಹಿಳಾ ಸದಸ್ಯರು ಮತ್ತು ರೈತ ಉತ್ಪಾದಕ ಸಂಸ್ಥೆಯ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಅಗತ್ಯ ಸೂಕ್ತ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಪಶು ವೈದ್ಯಾಧಿಕಾರಿ(ಆಡಳಿತ) ಅಥವಾ ಸಹಾಯಕ ನಿರ್ದೇಶಕರಿಗೆ ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಪಶುವೈದ್ಯಾಧಿಕಾರಿ 9482943111, ಚಳ್ಳಕೆರೆ 9448816499, ಹೊಳಲ್ಕೆರೆ 9972965479, ಹೊದುರ್ಗ 9945298407, ಹಿರಿಯೂರು 9483451044, ಮೊಳಕಾಲ್ಮೂರು 9900964820 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Tags :
Advertisement