Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಜರಂಗದಳ ಸೇವಾ ಸಪ್ತಾಹ : ವಾಸುದೇವರೆಡ್ಡಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

07:00 PM Jun 29, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.29 : ಬಜರಂಗದಳ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದು ಪರಿಷತ್, ಬಜರಂಗದಳದ ವತಿಯಿಂದ ಜೋಗಿಮಟ್ಟಿ ರಸ್ತೆಯಲ್ಲಿರುವ ವಾಸುದೇವರೆಡ್ಡಿ ಶಾಲಾ ಆವರಣದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಡಾ.ಯಶಸ್ ಹೆಚ್. ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿ ಮಾತನಾಡುತ್ತ ಆಧುನಿಕ ಜೀವನ ಶೈಲಿ ಹಾಗೂ ಬದಲಾದ ಆಹಾರ ಪದ್ದತಿಯಿಂದ ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯ ಕಾಯಿಲೆಗಳಿಂದ ಬಳಲುವುದು ಸಹಜ. ರಕ್ತದೊತ್ತಡ, ಸಕ್ಕರೆ ಕಾಯಿಲೆಯುಳ್ಳವರು ಆಗಿಂದಾಗ್ಗೆ ತಪಾಸಣೆ ಮಾಡಿಸಿಕೊಂಡು ಸಕಾಲಕ್ಕೆ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

ಧೂಮಪಾನ, ಮದ್ಯಪಾನ ಇವುಗಳಿಂದ ಪ್ರತಿಯೊಬ್ಬರು ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅಧಿಕ ಕೊಬ್ಬಿನಂಶವುಳ್ಳ ಆಹಾರವನ್ನು ಸೇವಿಸುವುದು ಹೃದಯಾಘಾತವನ್ನು ಆಹ್ವಾನಿಸಿದಂತೆ ಎಂದು ತಿಳಿಸಿದರು.
ಡಾ.ಹರ್ಷಿತಾರವರು ಆರೋಗ್ಯ ತಪಾಸಣೆ ನಡೆಸಿದರು.

ವಿಶ್ವಹಿಂದು ಪರಿಷತ್ ನಗರಾಧ್ಯಕ್ಷ ಅಶೋಕ್, ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್, ಜಿಲ್ಲಾ ಸಂಯೋಜಕ ಸಂದೀಪ್, ನಗರ ಕಾರ್ಯದರ್ಶಿ ರಂಗಸ್ವಾಮಿ, ನಗರ ಸಂಯೋಜಕ ಕಿಶೋರ್, ನಗರ ಸೇವಾ ಪ್ರಮುಖ್ ರಘು, ಜಿಲ್ಲಾ ಕಾರ್ಯಕಾರಿ ಸದಸ್ಯ ವಿಠಲ್, ವಿಜಯ್, ರಘು, ಬಸವರಾಜ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.

Advertisement
Tags :
Bajrang Dal SevabengaluruchitradurgaFree health checkup campsuddionesuddione newsVasudevareddy Schoolಉಚಿತ ಆರೋಗ್ಯ ತಪಾಸಣಾ ಶಿಬಿರಚಿತ್ರದುರ್ಗಬಜರಂಗದಳ ಸೇವಾ ಸಪ್ತಾಹಬೆಂಗಳೂರುವಾಸುದೇವರೆಡ್ಡಿ ಶಾಲೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article