Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ, ಸ್ವಚ್ಚತೆಗೆ ಆದ್ಯತೆ ನೀಡಿ, ಕನ್ನಡ ನಾಮಫಲಕ ಅಳವಡಿಸಿ | ಪೌರಾಯುಕ್ತೆ ಎಂ.ರೇಣುಕಾ

06:34 PM Feb 14, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.14 : ಏಕ ಬಳಕೆ ಪ್ಲಾಸ್ಟಿಕ್ ನಿಷೇಧ, ಕಸ ವಿಲೇವಾರಿ, ಸ್ವಚ್ಚತೆ, ಕನ್ನಡ ನಾಮಫಲಕ ಅಳವಡಿಸುವುದು, ಉದ್ದಿಮೆ ಪರವಾನಗಿ ಪಡೆಯುವುದು ಕುರಿತಂತೆ ಉದ್ದಿಮೆದಾರರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಗರಸಭೆಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

Advertisement

ನಗರಸಭೆ ಪೌರಾಯುಕ್ತರಾದ ಎಂ.ರೇಣುಕಾ ಉದ್ದಿಮೆದಾರರನ್ನು ಕುರಿತು ಮಾತನಾಡುತ್ತ ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಪ್ಲಾಸ್ಟಿಕ್ ಬಳಕೆ ಕಮ್ಮಿ ಮಾಡಿ ಬಟ್ಟೆ ಚೀಲಗಳನ್ನು ಬಳಸಿ. ಏಕೆಂದರೆ ಪ್ಲಾಸ್ಟಿಕ್ ಮಣ್ಣಿನಲ್ಲಿ ಕೊಳೆಯವುದಿಲ್ಲ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ದಿನನಿತ್ಯವೂ ನಿಮ್ಮ ಮನೆ ಬಾಗಿಲು ಹಾಗೂ ಅಂಗಡಿಗಳ ಬಳಿ ಬರುವ ನಗರಸಭೆ ವಾಹನಗಳಲ್ಲಿ ಕಸ ಹಾಕಿ ಸ್ವಚ್ಚತೆ ಕಾಪಾಡಿ ಎಂದು ಮನವಿ ಮಾಡಿದರು.

ಉದ್ದಿಮೆದಾರರು ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಪರಿಸರ ಇಂಜಿನಿಯರ್ ಜಾಫರ್, ಹೆಲ್ತ್ ಇನ್ಸ್‌ಪೆಕ್ಟರ್ ಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

Advertisement
Tags :
chitradurgasuddionesuddione newsಕನ್ನಡ ನಾಮಫಲಕ ಅಳವಡಿಸಿಚಿತ್ರದುರ್ಗಪೌರಾಯುಕ್ತೆ ಎಂ.ರೇಣುಕಾಪ್ಲಾಸ್ಟಿಕ್ ನಿಷೇಧಿಸಿಸುದ್ದಿಒನ್ಸುದ್ದಿಒನ್ ನ್ಯೂಸ್ಸ್ವಚ್ಚತೆ
Advertisement
Next Article