Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬೆಳಗಾವಿ ಅಧಿವೇಶನ : ಚಳ್ಳಕೆರೆ ನಗರಕ್ಕೆ ಯುಜಿಡಿ ಕಲ್ಪಿಸಲು 260 ಕೋಟಿ ರೂ. ಅನುದಾನ ಬಿಡುಗಡೆಗೆ ಶಾಸಕ ಟಿ. ರಘುಮೂರ್ತಿ ಮನವಿ

08:29 PM Dec 09, 2024 IST | suddionenews
Advertisement

 

Advertisement

 

ಬೆಳಗಾವಿ ಸುವರ್ಣ ವಿಧಾನಸೌಧ (ವಿಧಾನಸಭೆ) ಡಿ. 09 :
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರವು ಬೆಳೆಯುತ್ತಿರುವ ವೇಗಕ್ಕೆ ಅನುಗುಣವಾಗಿ, ನಗರಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಒಳಚರಂಡಿ ವ್ಯವಸ್ಥೆ (ಯುಜಿಡಿ) ನಿರ್ಮಾಣಕ್ಕೆ ಅಗತ್ಯವಿರುವ 260 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮನವಿ ಮಾಡಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಪ್ರಾರಂಭವಾದ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕ ಟಿ. ರಘುಮೂರ್ತಿ ಅವರು ಈ ಮನವಿ ಮಾಡಿದರು.

Advertisement

ಚಳ್ಳಕೆರೆ ಕ್ಷೇತ್ರದಲ್ಲಿ ನಾನು ಮೂರು ಬಾರಿ ಶಾಸಕನಾಗಿದ್ದೇನೆ. ಚಳ್ಳಕೆರೆ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರಕ್ಕೆ ಉತ್ತಮ ಮೂಲಭೂತ ಸೌಲಭ್ಯ ಕಲ್ಪಿಸುವುದು ನನ್ನ ಆಶಯವಾಗಿದೆ. ಚಳ್ಳಕೆರೆ ನಗರಕ್ಕೆ ಒಳಚರಂಡಿ ವ್ಯವಸ್ಥೆ (ಯುಜಿಡಿ) ಕಲ್ಪಿಸಲು 2013 ರಲ್ಲಿಯೇ ಪ್ರಸ್ತಾಪಿಸಲಾಗಿತ್ತು. ಬಳಿಕ 2021 ರಲ್ಲಿ ಈ ಯೋಜನೆಗೆ 197 ಕೋಟಿ ರೂ. ಗಳ ಅಂದಾಜು ಮಾಡಲಾಗಿತ್ತು. ಇದೀಗ ಯೋಜನೆಯ ವೆಚ್ಚ 253 ಕೋಟಿ ರೂ. ಆಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಪ್ರಸ್ತುತ ಯೋಜನೆಯ ಜಾರಿಗೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ, ಈಗ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದೇನೆ ಎಂದರು.

ಇದಕ್ಕೆ ಉತ್ತರ ನೀಡಿದ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಭೈರತಿ ಸುರೇಶ್ ಅವರು, 2015 ರಲ್ಲಿ ಈ ಯೋಜನೆ 100 ಕೋಟಿ ರೂ. ಗಳ ವೆಚ್ಚದಲ್ಲಿ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಸುಮಾರು 260 ಕೋಟಿ ರೂ. ಗಳ ವೆಚ್ಚದ ಅಂದಾಜು ಮಾಡಲಾಗಿದೆ. ಹೀಗಾಗಿ ಹಣಕಾಸು ಇಲಾಖೆಯ ಸಲಹೆ ಪಡೆದು, ಹಣಕಾಸಿನ ಲಭ್ಯತೆ ನೋಡಿಕೊಂಡು, ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಟಿ. ರಘುಮೂರ್ತಿ ಅವರು ಮುಖ್ಯಮಂತ್ರಿಗಳೇ ಯೋಜನೆಯ ಜಾರಿಗೆ ಆಸಕ್ತಿ ತೋರಿದ್ದು, ಮುಖ್ಯಮಂತ್ರಿಗಳು ಈ ಯೋಜನೆ ಸಾಕಾರಗೊಳಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

 

Advertisement
Tags :
Belgaum sessionbengaluruChallakere citychitradurgakannadaKannadaNewsMla t. RaghumurthysuddionesuddionenewsUGDಕನ್ನಡಕನ್ನಡವಾರ್ತೆಕನ್ನಡಸುದ್ದಿಚಳ್ಳಕೆರೆ ನಗರಚಿತ್ರದುರ್ಗಟಿ.ರಘುಮೂರ್ತಿಬೆಂಗಳೂರುಬೆಳಗಾವಿ ಅಧಿವೇಶನಯುಜಿಡಿಶಾಸಕ ಮನವಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article