Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸೆಪ್ಟೆಂಬರ್ 8 ಮತ್ತು 15 ರ ಭಾನುವಾರವೂ ತೆರೆದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

07:00 PM Sep 06, 2024 IST | suddionenews
Advertisement

ಬೆಂಗಳೂರು, ಸೆಪ್ಟೆಂಬರ್ 6, 2024 : ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ಸೆ. 8 ಮತ್ತು 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ತಿಳಿಸಿದೆ.

Advertisement

ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಬೆಸ್ಕಾಂ ವಲಯದ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ ಗಳನ್ನು ಈ ತಿಂಗಳ 8 ಮತ್ತು 15ರ ಭಾನುವಾರವೂ ತೆರೆಯಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಪೇಮೆಂಟ್‌ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್‌ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

Advertisement

ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನವೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಈಗಾಗಲೇ ಕೋರಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.
ಗೃಹ ಜ್ಯೋತಿಯೋಜನೆ ಅಡಿಯಲ್ಲಿ ಶೂನ್ಯ ಬಿಲ್‌ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯ ವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟ ಪಡಿಸಿದೆ.

Advertisement
Tags :
bengaluruBescomchitradurgasuddionesuddione newsಉಪವಿಭಾಗಕ್ಯಾಶ್‌ ಕೌಂಟರ್ಚಿತ್ರದುರ್ಗಬೆಂಗಳೂರುಬೆಸ್ಕಾಂಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article