Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆ

04:43 PM Aug 20, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ,ಆಗಸ್ಟ್. 20  : ಹಿಂದುಳಿದವರು, ಶೋಷಿತರು, ಧ್ವನಿಯಿಲ್ಲದವರಿಗೆ ಡಿ.ದೇವರಾಜ ಅರಸುರವರ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆಯಲ್ಲಿ ಇಬ್ಬರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

Advertisement


ಭಾರತವನ್ನು ವಿಜ್ಞಾನ ತಂತ್ರಜ್ಞಾನದಲ್ಲಿ ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ದೂರದೃಷ್ಟಿ ಹೊಂದಿದ್ದ ರಾಜೀವ್‍ಗಾಂಧಿರವರು ಹದಿನೆಂಟು ವರ್ಷದ ಯುವಕರಿಗೆ ಮತದಾನದ ಹಕ್ಕು ನೀಡಿದರು. ಎಲ್ಲರ ಕೈಯಲ್ಲೂ ಇಂದು ಮೊಬೈಲ್‍ಗಳು ಹರಿದಾಡುತ್ತಿದೆಯೆಂದರೆ ರಾಜೀವ್‍ರವರ ಕೊಡುಗೆ ಎಂದು ಸ್ಮರಿಸಿದರು.

ಇಂದಿರಾಗಾಂಧಿರವರು ಹತ್ಯೆಯಾದ ನಂತರ ಭಾರತದ ಪ್ರಧಾನಿಯಾದ ರಾಜೀವ್‍ಗಾಂಧಿರವರು ಪೆರಂಬದೂರಿನಲ್ಲಿ ಹತ್ಯೆಗೀಡಾದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿರುವ ಇತಿಹಾಸ ಕಾಂಗ್ರೆಸ್ ಪಕ್ಷಕ್ಕಿದೆ. ಹಾಗಾಗಿ ಇಂದಿನ ಯುವ ಪೀಳಿಗೆ ರಾಜೀವ್‍ಗಾಂಧಿರವರ ತತ್ವ ಸಿದ್ದಾಂತಗಳನ್ನು ತಿಳಿದುಕೊಳ್ಳಬೇಕೆಂದು ಉಳುವವನೆ ಭೂಮಿ ಒಡೆಯ ಎನ್ನುವ ಕಾಯಿದೆ ಜಾರಿಗೆ ತಂದು ಭೂಮಿ ಇಲ್ಲದವರು ಭೂ ಮಾಲೀಕನಾಗುವಂತ ಅವಕಾಶ ಕಲ್ಪಿಸಿದ ಧೀಮಂತ ನಾಯಕ ಡಿ.ದೇವರಾಜ ಅರಸುರವರು ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿದರು ಎಂದು ಗುಣಗಾನ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ದಿವಂಗತ ಡಿ.ದೇವರಾಜ ಅರಸು ಹಾಗೂ ರಾಜೀವ್‍ಗಾಂಧಿರವರು ದೇಶಕ್ಕೆ ನೀಡಿರುವ ಕೊಡುಗೆಯನ್ನು ಯುವ ಪೀಳಿಗೆಗೆ ತಿಳಿಸಬೇಕು. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಮೀಸಲಾತಿಯನ್ನು ತಂದು ಎಲ್ಲಾ ಜಾತಿ ಜನಾಂಗದವರಿಗೆ ಅಧಿಕಾರ ಸಿಗುವಂತೆ ಮಾಡಿದವರು ರಾಜೀವ್‍ಗಾಂಧಿ. ತಾಯಿ ಇಂದಿರಾಗಾಂಧಿಯನ್ನು ಕಳೆದುಕೊಂಡು ದುಃಖದಲ್ಲಿದ್ದ ಸಂದರ್ಭದಲ್ಲಿ ದೇಶದ ಪ್ರಧಾನಿಯಾಗಿ ಆಡಳಿತ ನಡೆಸಿದರು. ದೂರದೃಷ್ಟಿಯುಳ್ಳವರಾಗಿದ್ದರಿಂದ ವಿಜ್ಞಾನ-ತಂತ್ರಜ್ಞಾನಕ್ಕೆ ಒತ್ತು ಕೊಟ್ಟರು. ಅದೇ ರೀತಿ ಡಿ.ದೇವರಾಜ ಅರಸುರವರು ಉಳುವವನೆ ಭೂಮಿ ಒಡೆಯ ಎನ್ನುವ ಕಾಯಿದೆ ಜಾರಿಗೆ ತಂದು ಶೋಷಿತರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ರಾಜಕೀಯವಾಗಿ ಶಕ್ತಿ ತುಂಬಿದ ದಿಟ್ಟ ನಾಯಕ ಎಂದು ಸ್ಮರಿಸಿದರು.

ಎ.ಐ.ಸಿ.ಸಿ. ಸಂಚಾಲಕರು, ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರು ಹಾಗೂ ಗೋವಾ ಉಸ್ತುವಾರಿ ಡಾ.ಕೆ.ಅನಂತ್ ಮಾತನಾಡಿ ರಾಜೀವ್‍ಗಾಂಧಿ
ಡಿ.ದೇವರಾಜ್ ಅರಸ್ ಇವರುಗಳನ್ನು ಎಲ್ಲರೂ ನೆನಪು ಮಾಡಿಕೊಳ್ಳಬೇಕಿದೆ. ಮುಂದುವರೆದ ದೇಶಗಳ ಜೊತೆ ಪೈಪೋಟಿ ಮಾಡುವಷ್ಟರ ಮಟ್ಟಿಗೆ ಭಾರತವನ್ನು ಸದೃಢವಾನ್ನಾಗಿಸಿದ ಕೀರ್ತಿ ರಾಜೀವ್‍ಗಾಂಧಿ ಅವರಿಗೆ ಸಲ್ಲುತ್ತದೆ ಎಂದರು.

ಪಂಚಾಯತ್‍ರಾಜ್ ತಿದ್ದುಪಡಿ ವ್ಯವಸ್ಥೆ ಜಾರಿಗೆ ತಂದು ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ರಾಜಕೀಯವಾಗಿ ಮೀಸಲಾತಿ ನೀಡಿದ ರಾಜೀವ್‍ಗಾಂಧಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸುರವರ ವಿಚಾರ ತತ್ವ ಸಿದ್ದಾಂತಗಳನ್ನು ಯುವ ಪೀಳಿಗೆಗೆ ಪರಿಚಯಿಸಬೇಕಿದೆ ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡುತ್ತ ರಾಜೀವ್‍ಗಾಂಧಿರವರು ದೇಶ ಸೇವೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದರು. ಅವರ ತಾಯಿ ಇಂದಿರಾಗಾಂಧಿ ಕೂಡ ಅಂಗರಕ್ಷಕರಿಂದಲೇ ಹತ್ಯೆಗೊಳಗಾದರು. ಒಟ್ಟಾರೆ ನೆಹರು ಕುಟುಂಬಕ್ಕೆ ತ್ಯಾಗ ಬಲಿದಾನಗಳ ಇತಿಹಾಸವಿದೆ. ಪ್ರತಿಯೊಬ್ಬರು ರಾಜೀವ್‍ಗಾಂಧಿ ಹಾಗೂ ಡಿ.ದೇವರಾಜ ಅರಸುರವರು ಕೊಡುಗೆಯನ್ನು ಸ್ಮರಿಸಬೇಕೆಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ಮಾತನಾಡಿ ರಾಜೀವ್‍ಗಾಂಧಿ ಮತ್ತು ಡಿ.ದೇವರಾಜ ಅರಸುರವರು ದೇಶ ಕಂಡಂತ ಮಹಾನ್ ನಾಯಕರು. ಮೀಸಲಾತಿ ಮೂಲಕ ರಾಜೀವ್‍ಗಾಂಧಿ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಿದರು. ಗ್ರಾಮ ಪಂಚಾಯಿತಿಯಿಂದ ಹಿಡಿದು ಜಿಲ್ಲಾ ಪಂಚಾಯಿತಿವರೆಗೆ ಇಂದು ಮಹಿಳೆಯರು ಅಧಿಕಾರ ಅನುಭವಿಸುತ್ತಿದ್ದಾರೆಂದರೆ ಅದಕ್ಕೆ ರಾಜೀವ್‍ಗಾಂಧಿಯವರಲ್ಲಿದ್ದ ದೂರದೃಷ್ಟಿ ಕಾರಣ. ಹದಿನೆಂಟು ವರ್ಷದ ಯುವ ಜನಾಂಗಕ್ಕೆ ಮತದಾನದ ಹಕ್ಕು ನೀಡಿದರು. ವಿಜ್ಞಾನ ತಂತ್ರಜ್ಞಾನದ ಮೂಲಕ ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದರು ಎಂದು ನೆನಪಿಸಿಕೊಂಡರು.

ಡಿ.ದೇವರಾಜ ಅರಸುರವರು ಹಿಂದುಳಿದ ವರ್ಗಗಳ ಹರಿಕಾರ ಎನಿಸಿಕೊಂಡು ಉಳುವವನೆ ಭೂಮಿ ಒಡೆಯ ಎನ್ನುವ ಕಾನೂನು ಜಾರಿಗೆ ತಂದಂತ ದಿಟ್ಟಿ ನಾಯಕ. ಹಾಸ್ಟೆಲ್ ವಸತಿ ಸೌಲಭ್ಯಗಳನ್ನು ಕೊಟ್ಟಿದ್ದರಿಂದ ಬಡ ಮಕ್ಕಳು ಶಿಕ್ಷಣ ಪಡೆಯಲು ಅನುಕೂಲವಾಗಿದೆ. ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತ ನಡೆಸಿ ಮೂರನೆ ಬಾರಿಗೆ ಈಗ ಪ್ರಧಾನಿಯಾಗಿರುವ ಮೋದಿಯಿಂದ ದೇಶಕ್ಕೆ ಯಾವ ಕೊಡುಗೆಯೂ ಇಲ್ಲ ಎಂದು ಟೀಕಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಬಿ.ಟಿ.ಜಗದೀಶ್, ಟಿ.ಸ್ವಾಮಿ, ಉಪಾಧ್ಯಕ್ಷರುಗಳಾದ ನಜ್ಮತಾಜ್, ಎಸ್.ಎನ್.ರವಿಕುಮಾರ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ
ಎನ್.ಡಿ.ಕುಮಾರ್, ಎಸ್.ಟಿ.ವಿಭಾಗದ ಜಿಲ್ಲಾಧ್ಯಕ್ಷ ಮಂಜುನಾಥ್, ಪ್ರಕಾಶ್‍ರಾಮನಾಯ್ಕ, ಸೈಯದ್ ಖುದ್ದೂಸ್, ಶಬ್ಬೀರ್ ಅಹಮದ್, ಜಿ.ವಿ.ಮಧುಗೌಡ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತ ನಂದಿನಿಗೌಡ, ಉಪಾಧ್ಯಕ್ಷೆ ಪಿ.ಕೆ.ಪವಿತ್ರ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮೋಕ್ಷರುದ್ರಸ್ವಾಮಿ
ಮುನಿರಾ ಎ.ಮಕಾಂದಾರ್, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯ ಹೆಚ್.ಅಂಜಿನಪ್ಪ, ಸೈಯದ್ ಸೈಫುಲ್ಲಾ, ಫೈಲ್ವಾನ್ ತಿಪ್ಪೇಸ್ವಾಮಿ, ಭಾಗ್ಯಮ್ಮ, ಸುಧಾ, ಮೃತ್ಯುಂಜಯ ಇನ್ನು ಮುಂತಾದವರು ಜಯಂತಿಯಲ್ಲಿ ಭಾಗವಹಿಸಿದ್ದರು. ನಗರಸಭೆಯ ಇಬ್ಬರು ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

Advertisement
Tags :
bengaluruBirthday celebrationschitradurgaChitradurga District Congress OfficeD. Devaraja ArasuraD. Sudhakarformer Chief MinisterFormer Prime Ministerrajiv gandhisuddionesuddione newsಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article