Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಾಮಾನ್ಯರಿಂದ ಅಸಾಮಾನ್ಯಕ್ಕೇರಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು : ಎಡಿಸಿ ಬಿ.ಟಿ.ಕುಮಾರಸ್ವಾಮಿ

04:52 PM Aug 20, 2024 IST | suddionenews
Advertisement

ಚಿತ್ರದುರ್ಗ. ಆಗಸ್ಟ್.20: ನಾರಾಯಣ ಗುರುಗಳು ಅವರು ಹಿಂದುಳಿದ ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಸಾಮಾನ್ಯರಿಂದ ಅಸಾಮಾನ್ಯಕ್ಕೇರಿ ಬ್ರಹ್ಮಶ್ರೀ ಪದವಿ ಪಡೆದ ಮಹಾನ್ ಗುರುಗಳು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ನಾರಾಯಣಗುರುಗಳ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ನಾರಾಯಣ ಗುರುಗಳು ಅಂದಿನ ದಿನಮಾನಗಳಲ್ಲಿನ ಶೋಷಣೆ, ಧಾರ್ಮಿಕ ಅಸಹಿಷ್ಣುತೆ, ಅಸ್ಪಶ್ಯತೆಯ ಪಿಡುಗು ಹೋಗಲಾಡಿಸಲು ಶ್ರಮಿಸಿದವರು. ಸಾಮಾನ್ಯ ಜನರಿಗೆ ದೇವಾಲಯದ ಒಳಗಡೆ ಹೋಗಲು ಅವಕಾಶ ಸಿಗದಿದ್ದ ಸಂದರ್ಭದಲ್ಲಿ ನಾರಾಯಣ ಗುರುಗಳು ಪರ್ಯಾಯವಾಗಿ ದೇವಸ್ಥಾನಗಳನ್ನು ನಿರ್ಮಾಣ ಮಾಡಿದರು ಎಂದು ತಿಳಿಸಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳು ನಮ್ಮ ಬದುಕಿಗೆ ದಾರಿದೀಪವಾಗಿವೆ ಎಂದು ಹೇಳಿದರು.

Advertisement

ಆರ್ಯ ಈಡಿಗ ಸಮಾಜದ ವತಿಯಿಂದ ವಸತಿ ನಿಲಯ ನಿರ್ಮಾಣ ಮಾಡಿ, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಸಮಾಜಕ್ಕೆ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡಿದ್ದು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಜೀವನ್, ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಖಜಾಂಚಿ ನಾಗೇಂದ್ರ ಪ್ರಸಾದ್, ತಾಲ್ಲೂಕು ಅಧ್ಯಕ್ಷ ಜಗದೀಶ,  ಜಿಲ್ಲಾ ಉಪಾಧ್ಯಕ್ಷ ಟಿ.ಸ್ವಾಮಿ, ತಾಲ್ಲೂಕು ಅಧ್ಯಕ್ಷ ಲಕ್ಷ್ಮೀಕಾಂತ್, ನಗರಸಭೆ ಸದಸ್ಯೆ ಅನುರಾಧ ರವಿಕುಮಾರ್,  ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಚಿತ್ರದುರ್ಗ ಶಾಖೆಯ ಉಪ  ವ್ಯವಸ್ಥಾಪಕ ಸತ್ಯನಾರಾಯಣ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ಸಮಾಜದ ಮುಖಂಡರು ಇದ್ದರು.

Advertisement
Tags :
ADC BT KumaraswamybengaluruBrahmashree Narayana GuruchitradurgaOrdinary to Extraordinarysuddionesuddione newsಎಡಿಸಿ ಬಿ.ಟಿ.ಕುಮಾರಸ್ವಾಮಿಚಿತ್ರದುರ್ಗಬೆಂಗಳೂರುಬ್ರಹ್ಮಶ್ರೀ ನಾರಾಯಣ ಗುರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article