Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಳ್ಳಕೆರೆ | ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

08:52 PM Apr 11, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 11 : ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

Advertisement

ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸಿನ ಬಳಿ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಕಾರು ಗುದ್ದಿದ  ರಭಸಕ್ಕೆ ಬೈಕ್ ಸವಾರನಾದ ಕೋನಿಗರಹಳ್ಳಿ ಗ್ರಾಮದ ಮಹಾಂತೇಶ ಎಂಬುವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪತ್ನಿಯೊಂದಿಗೆ  ಕೋನಿಗರಹಳ್ಳಿ ಗ್ರಾಮದಿಂದ ಹೆಗ್ಗೆರೆ ಗ್ರಾಮಕ್ಕೆ ತೆರಳುವಾಗ ಈ ಘಟನೆ ನಡೆದಿದ್ದು ಪತ್ನಿ  ಪ್ರೇಮಾ  ಅವರಿಗೆ ಕೈಗೆ ತೀವ್ರವಾಗಿ ಪೆಟ್ಟಾಗಿದೆ.  ಕಾರಿನಲ್ಲಿ ಇದ್ದ ಮೂವರಿಗೆ ಗಾಯಗಳಾಗಿದ್ದು  ಚಿಕಿತ್ಸೆಗಾಗಿ ಇವರನ್ನು ಹತ್ತಿರದ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಚಳ್ಳಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Tags :
accident newsbengaluruchallakerechitradurgaroad accidentsuddionesuddione newsಅಪಘಾತ ಸುದ್ದಿಕಾರು ಬೈಕ್ ಅಪಘಾತಚಳ್ಳಕೆರೆಚಿತ್ರದುರ್ಗಬೆಂಗಳೂರುಬೈಕ್ ಸವಾರ ಸಾವುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article