For the best experience, open
https://m.suddione.com
on your mobile browser.
Advertisement

ಚಳ್ಳಕೆರೆ | ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

07:45 PM Jun 04, 2024 IST | suddionenews
ಚಳ್ಳಕೆರೆ   ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

Advertisement

ಸುದ್ದಿಒನ್, ಚಳ್ಳಕೆರೆ, ಜೂ.04 :  ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಜಯಭೇರಿ ಭಾರಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ ಎದುರು 48,121 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

Advertisement

ಗೋವಿಂದ ಎಂ ಕಾರಜೋಳ ಇಂದು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದಲ್ಲಿ ಬಿಜೆಪಿ  ಹಾಗೂ  ಜೆಡಿಎಸ್ ಮುಖಂಡರು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಿದರು.

Advertisement
Advertisement

ಈ ವೇಳೆ ಜೆಡಿಎಸ್ ಮುಖಂಡ ಎಂ.ರವೀಶ ಕುಮಾರ್ , ಬಿಜೆಪಿ ಮುಖಂಡ ಅನಿಲ್ ಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಟಿ ತಿಪ್ಪೇಸ್ವಾಮಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರಾಮದಾಸ್ ಬಿಜೆಪಿ ತಾಲೂಕು ಅಧ್ಯಕ್ಷ  ಸೂರನಹಳ್ಳಿ ಶ್ರೀನಿವಾಸ್, ಬಿಜೆಪಿ ಮುಖಂಡರಾದ ಜಯಪಾಲಯ್ಯ ಬಸವರಾಜ್ ಮಂಜುನಾಥ ನಗರಸನಭೆ ಸದಸ್ಯೆ ಸೋಮಶೇಖರ ಮಂಡಿಮಠ,ನೇತ್ರಪಾಲನಾಯಕ ಜಗದಾಂಭ ,ಸಹನ  ಸೇರಿದಂತೆ ಬಿಜೆಪಿ ಕಾರ್ಯಕರ್ತರು ಮುಖಂಡರು ಜೆಡಿಎಸ್ ಕಾರ್ಯಕರ್ತರು ಮುಖಂಡರು ಇದ್ದರು.

Advertisement
Tags :
Advertisement