For the best experience, open
https://m.suddione.com
on your mobile browser.
Advertisement

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಓರ್ವ ಸಾವು

09:40 PM Jul 24, 2024 IST | suddionenews
ಚಳ್ಳಕೆರೆ   ರಸ್ತೆ ಅಪಘಾತದಲ್ಲಿ ಓರ್ವ ಸಾವು
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

Advertisement
Advertisement

ಸುದ್ದಿಒನ್, ಚಳ್ಳಕೆರೆ, ಜುಲೈ. 24 : ಬೈಕ್  ಹಾಗೂ ಬುಲೆರೋ ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ.

ಮೊಳಕಾಲ್ಮೂರು ತಾಲ್ಲೂಕಿನ ಸಮೀರ್(26)  ಹಾಗೂ ಅರ್ಪೀನಬಾನು(23)  ಎನ್ನುವ  ನವದಂಪತಿ ಚಳ್ಳಕೆರೆಗೆ ಬರುತ್ತಿದ್ದು ಚಳ್ಳಕೆರೆ ಕಡೆಯಿಂದ ಬಳ್ಳಾರಿ ಕಡೆ ಹೋಗುತ್ತಿದ್ದ ಬುಲೇರೋ ಪಿಕಾಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಕೊಂಡ್ಲಹಳ್ಳಿಯ ಸಮೀರ್ ಸಾವನ್ನಪ್ಪಿದ್ದು, ಇಮಾಮಪುರ ಗ್ರಾಮದ ಅರ್ಪೀನಭಾನು ಗಾಯಗೊಂಡಿದ್ದಾರೆ.

Advertisement

ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಈ ಘಟನೆ ನಡೆದಿದೆ  . ಅಪಘಾತವಾದ ಘಟನ ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ರಾಜ ಫಕ್ರುದ್ದೀನ್ ದೇಸಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಅಪಘಾತದ ಘಟನೆ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

Tags :
Advertisement