For the best experience, open
https://m.suddione.com
on your mobile browser.
Advertisement

ಚಿತ್ರದುರ್ಗದಲ್ಲಿ ಬಂಡಾಯವೆದ್ದಿದ್ದ ಚಂದ್ರಪ್ಪ ಮುನಿಸು ಶಮನ : ಸಕ್ಸಸ್ ಆಯ್ತು ಯಡಿಯೂರಪ್ಪ ಸಂಧಾನ

08:29 PM Apr 01, 2024 IST | suddionenews
ಚಿತ್ರದುರ್ಗದಲ್ಲಿ ಬಂಡಾಯವೆದ್ದಿದ್ದ ಚಂದ್ರಪ್ಪ ಮುನಿಸು ಶಮನ   ಸಕ್ಸಸ್ ಆಯ್ತು ಯಡಿಯೂರಪ್ಪ ಸಂಧಾನ
Advertisement

Advertisement

ಸುದ್ದಿಒನ್, ಬೆಂಗಳೂರು, ಏಪ್ರಿಲ್.01 : ತನ್ನ ಮಗನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪನವರಿಗೆ ನಿರಾಸೆಯಾಗಿತ್ತು. ಪುತ್ರ ರಘು ಚಂದನ್ ಅವರಿಗೆ ಬಿಟ್ಟು ಟಿಕೆಟ್ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ನೀಡಲಾಗಿತ್ತು. ಇದರಿಂದ ಬೇಸರಗೊಂಡಿದ್ದ ಚಂದ್ರಪ್ಪ ಬಂಡಾಯವೆದ್ದಿದ್ದರು. ಕಳೆದ ಕೆಲ ದಿನಗಳಿಂದಾನೂ ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕರ ಬಂಡಾಯದ ಬೆಂಕಿ ಹೊಗೆಯಾಡುತ್ತಿತ್ತು. ಇದೀಗ ಬಂಡಾಯದ ಬಿಸಿಯನ್ನು ಆರಿಸುವಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ಸಫಲರಾಗಿದ್ದಾರೆ.

Advertisement

Advertisement

ಪ್ರತ್ಯೇಕ ಸ್ಪರ್ಧೆ ಮಾಡುವ ನಿರ್ಧಾರಕ್ಕೆ ಬಂದಿದ್ದ ಎಂ ಚಂದ್ರಪ್ಪ ಅವರನ್ನು ತಮ್ಮ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸಕ್ಕೆ ಕರೆಸಿದ್ದರು ಬಿ ಎಸ್ ಯಡಿಯೂರಪ್ಪ. ಬಳಿಕ ಚಂದ್ರಪ್ಪ ಅವರ ಬಳಿ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ಅವರು ಮಾತುಕತೆ ನಡೆಸಿದ್ದಾರೆ. ಅವರ ಸಂಧಾನ ಸಭೆ ಯಶಸ್ವಿಯಾಗಿದ್ದು, ತಂದೆ-ಮಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರವಾಗಿ ಕೆಲಸ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಎಂ. ಚಂದ್ರಪ್ಪ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ನನ್ನ ಮಗ ಪಕ್ಷೇತರವಾಗಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ನಮಗೆ ಯಾವತ್ತೂ ಅನ್ಯಾಯ ಮಾಡಿದವರಲ್ಲ. ಅವರು ನನ್ನೊಂದಿಗೆ ಮತ್ತು ಬೆಂಬಲಿಗರ ಜೊತೆ ಮಾತಾಡಿದ್ದಾರೆ. ಅವರ ಮಾತಿಗೆ ಗೌರವ ಕೊಟ್ಟು ನನ್ನ ಮಗ ಪಕ್ಷೇತರನಾಗಿ ಸ್ಪರ್ಧೆ ಮಾಡುವುದಿಲ್ಲ. ನಾವು ಬಿಜೆಪಿ ಪರ ಕೆಲಸ ಮಾಡುತ್ತೇವೆ, ಅದು ಅನಿವಾರ್ಯ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಪ್ರಚಾರದಲ್ಲಿ ಭಾಗಿಯಾಗುತ್ತೇವೆ. ಪುತ್ರ ರಘುಚಂದನ್​ಗೆ ಮುಂದೆ ಉತ್ತಮ ಅವಕಾಶ ನೀಡುವ ವಿಶ್ವಾಸ ಇದೆ ಎಂದರು.

ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಚಂದ್ರನ್ ಮಾತನಾಡಿ, ಬಿಜೆಪಿ ಅಭ್ಯರ್ಥಿಗೆ ನಾವು ಬೆಂಬಲ ಕೊಡುವ ತೀರ್ಮಾನ ಮಾಡಿದ್ದೇವೆ. ನರೇಂದ್ರ ಮೋದಿ ಕೈಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ. ಯಡಿಯೂರಪ್ಪ ನಮಗೆ ಗಾಡ್ ಫಾದರ್. ಯಡಿಯೂರಪ್ಪ ನೆರಳಲ್ಲೇ ರಾಜಕೀಯಕ್ಕೆ ಬಂದವರಾಗಿದ್ದೇವೆ. ಯಡಿಯೂರಪ್ಪ ಸಾಹೇಬರನ್ನು ನಂಬಿ ನಾವು ಬಿಜೆಪಿಗೆ ಬಂದಿದ್ದೇವೆ. ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ, ಮತ್ತೆ ಬಿಜೆಪಿಗೆ ಬಂದಾಗ ಅಚಲವಾಗಿ ನಿಂತಿದ್ದೆವು. ಯಡಿಯೂರಪ್ಪ ಅವರು ತಂದೆ ಸ್ಥಾನದಲ್ಲಿದ್ದಾರೆ, ಅವರ ಮಾತನ್ನು ಕೇಳುತ್ತೇವೆ ಎಂದರು.

Advertisement
Tags :
Advertisement