Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

02:59 PM Jul 19, 2024 IST | suddionenews
Advertisement

 

Advertisement

 

ಚಿತ್ರದುರ್ಗ. ಜುಲೈ19: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Advertisement

ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ರಸ್ತೆಯ ಮೂಲಕ ಮಧ್ಯಾಹ್ನ 2ಕ್ಕೆ ಚಿತ್ರದುರ್ಗದ ಭೋವಿ  ಗುರುಪೀಠಕ್ಕೆ ಆಗಮಿಸಿ, ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.

ಸಂಜೆ 4.30ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಹೆಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸುವರು.

ನಂತರ ರಾತ್ರಿ 7ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ತಿಳಿಸಿದ್ದಾರೆ.

Advertisement
Tags :
bengaluruChief Minister Siddaramaiahchitradurgasuddionesuddione newstomorrowಚಿತ್ರದುರ್ಗಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article