For the best experience, open
https://m.suddione.com
on your mobile browser.
Advertisement

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

05:41 PM Nov 15, 2024 IST | suddionenews
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ
Advertisement

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರುರವರ ಜನ್ಮದಿನಾಚರಣೆ ಅಂಗವಾಗಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಎಂಟು ದಿನಗಳ ಕಾಲ ನಡೆದ ಅಂತರ ಶಾಲಾ ಮಟ್ಟದ ಸಾಂಸ್ಕøತಿಕ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಮತ್ತು ಪದಕಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Advertisement

ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ ಮಾತನಾಡಿ ಮಕ್ಕಳೆಂದರೆ ದೇವರ ಸಮಾನ, ಏಕೆಂದರೆ ಅವರಲ್ಲಿ ಕಪಟತನ, ಮೋಸ ಇರುವುದಿಲ್ಲ. ಯಾವ ಮನೆಯಲ್ಲಿ ಮಗು ಕುಣಿದು ಕುಪ್ಪಳಿಸಿ ಆನಂದಿಸುತ್ತದೋ ಅಂತಹ ಮನೆಯಲ್ಲಿ ಸಂಭ್ರಮವಿರುತ್ತದೆ. ನೆಹರುರವರಿಗೆ ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಅದಕ್ಕಾಗಿ ನೆಹರು ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯನ್ನಾಗಿ ಪ್ರತಿ ವರ್ಷವೂ ಆಚರಿಸಲಾಗುವುದೆಂದರು.

Advertisement

ಸಾಂಸ್ಕøತಿಕ ಚಟುವಟಿಕೆ ಹಾಗೂ ಕ್ರೀಡೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಬಹುದು, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಆಡಬೇಕು. ಸೋತವರು ಮುಂದೆ ಗೆಲ್ಲಲು ಶ್ರಮಿಸಬೇಕೆಂದು ತಿಳಿಸಿದರು.

Advertisement

ಬಿ.ಇ.ಡಿ.ಕಾಲೇಜು ಪ್ರಾಂಶುಪಾಲರಾದ ಡಾ.ಅನಂತರಾಮು, ಪದವಿಪೂರ್ವ ಕಾಲೇಜು ಪ್ರಾಚಾರ್ಯರಾದ ಕೇಶವಮೂರ್ತಿ, ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿದ್ದರು.

Advertisement
Tags :
Advertisement