For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಫೆಬ್ರವರಿ 02 ರಿಂದ 04 ರವರೆಗೆ 31ನೇ ಫಲ-ಪುಷ್ಪ ಪ್ರದರ್ಶನ

05:27 PM Feb 01, 2024 IST | suddionenews
ಚಿತ್ರದುರ್ಗ   ಫೆಬ್ರವರಿ 02 ರಿಂದ 04 ರವರೆಗೆ 31ನೇ ಫಲ ಪುಷ್ಪ ಪ್ರದರ್ಶನ
Advertisement

ಚಿತ್ರದುರ್ಗ. ಫೆ.02 : ತೋಟಗಾರಿಕೆ ಇಲಾಖೆ, ಜಿಲ್ಲಾಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘ ಮತ್ತು ಕೃಷಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 31ನೇ ಫಲ-ಪುಷ್ಪ ಪ್ರದರ್ಶನ ಇದೇ ಫೆ.02 ರಿಂದ 04 ರವರೆಗೆ ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯ  ತೋಟಗಾರಿಕೆ ಇಲಾಖೆ ಆವರಣದಲ್ಲಿ ಏರ್ಪಡಿಸಲಾಗಿದ್ದು, ಫೆ.02ರಂದು ಸಂಜೆ 6ಕ್ಕೆ ಫಲ-ಪುಷ್ಪ ಪ್ರದರ್ಶನದ ಉದ್ಘಾಟನೆ ಸಮಾರಂಭ ನಡೆಯಲಿದೆ.

Advertisement
Advertisement

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಹಾಗೂ ಸಂಸದ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು.

Advertisement

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

Advertisement
Advertisement

ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲ ಇಕ್ಬಾಲ್, ಲಾಲ್‍ಬಾಗ್ ತೋಟಗಾರಿಕೆ ನಿರ್ದೇಶಕ ಡಾ.ಡಿ.ಎಸ್.ರಮೇಶ್, ಅಪರ ನಿರ್ದೇಶಕರಾದ ಡಾ.ಪಿ.ಎಂ.ಸಬರದ, ಕೆ.ಎಂ.ಪರಶಿವಮೂರ್ತಿ, ಕೆ.ಬಿ.ದುಂಡಿ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ಧಮೇರ್ಂಧರ್ ಕುಮಾರ್ ಮೀನಾ ಭಾಗವಹಿಸುವರು.
ಫೆಬ್ರವರಿ  03 ರಂದು ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 11ಕ್ಕೆ ಹಣ್ಣು ಮತ್ತು ತರಕಾರಿಗಳನ್ನು ಗುರುತಿಸುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಮಧ್ಯಾಹ್ನ 2ಕ್ಕೆ ಪ್ರಬಂಧ ಸ್ಪರ್ಧೆ, ಸಂಜೆ 5ಕ್ಕೆ ಭಾವಗೀತೆ ಮತ್ತು ಜನಪದಗೀತೆ ಸ್ಪರ್ಧೆ, ಸಂಜೆ 6.30ಕ್ಕೆ ಪ್ಯಾನ್ಸಿಡ್ರೆಸ್ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಫೆ4ರಂದು  ಸಂಜೆ 6ಕ್ಕೆ ಫಲ-ಪುಷ್ಪ ಪ್ರದರ್ಶನದ ಸಮಾರೋಪ ಮತ್ತು ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.   ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಹಾಗೂ ಸಂಸದ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು.

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಹುಮಾನಗಳ ವಿತರಣೆ ಮಾಡುವರು. ತೋಟಗಾರಿಕೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಬೆಂಗಳೂರು ವಿಭಾಗದ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕ ಎಂ.ವಿಶ್ವನಾಥ್, ಲಾಲ್‍ಬಾಗ್ ಜಂಟಿ ನಿರ್ದೇಶಕರು ಹಾಗೂ ಚಿತ್ರದುರ್ಗ ನೋಡಲ್ ಅಧಿಕಾರಿ ಬಿ.ಎನ್.ಪ್ರಸಾದ್, ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಂ.ಎಸ್.ಸೋಮಶೇಖರ್ ಭಾಗವಹಿಸುವರು.
ಫಲ-ಪುಷ್ಪಪ್ರದರ್ಶನದ ಅಂಗವಾಗಿ ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿರುತ್ತದೆ. ಫೆ.2 ರಿಂದ 4 ರವರೆಗೆ ಪ್ರತಿ ದಿನ ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ಸಾರ್ವಜನಿಕರು ಫಲ-ಪುಷ್ಪ ಪ್ರದರ್ಶನ ವೀಕ್ಷಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ. ಸವಿತ ತಿಳಿಸಿದ್ದಾರೆ.

Advertisement
Tags :
Advertisement