Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಮರಕ್ಕೆ ಬಸ್ ಡಿಕ್ಕಿ, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

09:30 PM Dec 17, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 17 : ದಂಡಿನಕುರುಬರಹಟ್ಡಿ ಬಳಿ ಮಂಗಳವಾರ ರಾತ್ರಿ 7.30 ರ ವೇಳೆಯಲ್ಲಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Advertisement

ಚಳ್ಳಕೆರೆ ಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಇವರಲ್ಲಿ ಮೂವರಿಗೆ ಮಾತ್ರ ತೀವ್ರವಾಗಿ ಗಾಯಗಳಾಗಿದ್ದು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಬಿಡುಗಡೆಗೊಳಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

ಲಾರಿ ಡಿಕ್ಕಿ, ಚಿರತೆ ಸಾವು : 

Advertisement

ಮೊಳಕಾಲ್ಮೂರು ತಾಲ್ಲೂಕು ಕಣ್ವಕುಪ್ಪೆ ಕ್ರಾಸ್ ಬಳಿ ಮಂಗಳವಾರ ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವಿಗೀಡಾಗಿದೆ. ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ನಡೆದ ಅಪಘಾತದಲ್ಲಿ ಎರಡು ವರ್ಷದ ಗಂಡು ಚಿರತೆ ಮೃತಪಟ್ಟಿದೆ.  ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ

Advertisement
Tags :
bengalurubus collidedchitradurgasuddionesuddione newsten people were injuredಚಿತ್ರದುರ್ಗಬೆಂಗಳೂರುಮರಕ್ಕೆ ಬಸ್ ಡಿಕ್ಕಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article