Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಬಿಸಿಯೂಟ ತಯಾರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎ.ಐ.ಟಿ.ಯು.ಸಿ. ಪ್ರತಿಭಟನೆ

05:24 PM Aug 17, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಬಿಸಿಯೂಟ ತಯಾರಕರಿಗೆ ಏಪ್ರಿಲ್ ಮತ್ತು ಮೇ ತಿಂಗಳ ವೇತನವನ್ನು ಕೂಡಲೆ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಎ.ಐ.ಟಿ.ಯು.ಸಿ. ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

Advertisement

ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಚೇರಿಯಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ನೀಡದ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಮುಖ್ಯ ಅಡುಗೆಯವರಿಗೆ ತಿಂಗಳಿಗೆ 3700 ರೂ. ಹಾಗೂ ಸಹಾಯಕರಿಗೆ 3600 ರೂ.ಗಳನ್ನು ನೀಡುತ್ತಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ಮಾಡುವುದು ಕಷ್ಟವಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮೂರು ದಿನಗಳ ಕಾಲ ಧರಣಿ ನಡೆಸಿ ಸರ್ಕಾರವನ್ನು ಒತ್ತಾಯಿಸಿ ನಾಲ್ಕು ತಿಂಗಳುಗಳಾಗಿದ್ದರು ಕನಿಷ್ಟ ವೇತನ ಜಾರಿಯಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಕ್ಕಳ ಹಾಜರಾತಿ ಕಡಿಮೆಯಿದೆಯೆಂದು ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆಯುವ ಬದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಯನ್ನು ಪರಿಹರಿಸಬೇಕು. ಬಿಸಿಯೂಟ ತಯಾರಕರು ನಿವೃತ್ತಿಯಾದರೆ ಎರಡು ಲಕ್ಷ ರೂ. ಇಡಿಗಂಟು ನೀಡಬೇಕು. ಬಿಸಿಯೂಟ ತಯಾರಕರು ಕೆಲಸ ಮಾಡುವಾಗ ಸಾವಿಗೀಡಾದರೆ ಹತ್ತು ಲಕ್ಷ ರೂ.ಗಳ ಪರಿಹಾರ ಘೋಷಿಸಿ ಇ.ಎಸ್.ಐ. ಮತ್ತು ಪಿ.ಎಫ್. ಜಾರಿಗೊಳಿಸುವಂತೆ ಒತ್ತಾಯಿಸಿದರು.

ಎ.ಐ.ಟಿ.ಯು.ಸಿ. ರಾಜ್ಯ ಸಂಚಾಲಕ ಸಿ.ವೈ.ಶಿವರುದ್ರಪ್ಪ, ರಾಜ್ಯ ಮಂಡಳಿ ಸದಸ್ಯ ಕಾಂ.ಟಿ.ಆರ್.ಉಮಾಪತಿ, ಸಂಘಟನಾ ಕಾರ್ಯದರ್ಶಿ ಕಾಂ.ಕೆ.ಇ.ಸತ್ಯಕೀರ್ತಿ, ಕಾಂ.ಸುವರ್ಣಮ್ಮ, ಕಾಂ.ದೊಡ್ಡುಳ್ಳಾರ್ತಿ ಕರಿಯಣ್ಣ, ಕಾಂ.ಪರ್ವಿನ್‍ಭಾನು, ಕಾಂ.ಮಂಗಳಮ್ಮ, ಕಾಂ.ಶಾಂತಮ್ಮ, ಕಾಂ.ಗಿರಿಜಮ್ಮ, ಕಾಂ.ತಿಪ್ಪಮ್ಮ, ಕಾಂ.ಓಬಕ್ಕ ಸೇರಿದಂತೆ ನೂರಾರು ಬಿಸಿಯೂಟ ತಯಾರಕರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement
Tags :
A.I.T.U.C protestbengalurubisiyuta workerschitradurgasuddionesuddione newsvarious demandsಎ.ಐ.ಟಿ.ಯು.ಸಿ. ಪ್ರತಿಭಟನೆಚಿತ್ರದುರ್ಗಬಿಸಿಯೂಟ ತಯಾರಕರಬೆಂಗಳೂರುವಿವಿಧ ಬೇಡಿಕೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article