Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

10:58 PM Aug 13, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.13 : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಬಲಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು (ಮಂಗಳವಾರ) ರಾತ್ರಿ ನಡೆದಿದೆ.

Advertisement

ನಗರದ ಹೊರವಲಯದ ಹೊಸ ಹೈವೆ ತಮಟಕಲ್ಲು ಬೈಪಾಸ್ ಬಳಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಚಿರತೆಗೆ ಡಿಕ್ಕಿ ಹೊಡೆದ ಬಳಿಕ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಕೇವಲ ಒಂದು ವಾರದ ಹಿಂದೆಯಷ್ಟೇ ಇದೇ ತಮಟಕಲ್ಲು ಬಳಿ ಕರಡಿ ಅಪಘಾತಕ್ಕೀಡಾಗಿತ್ತು.

ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Advertisement
Tags :
bengaluruchitradurgadiedleopardsuddionesuddione newsvehicleಅಪರಿಚಿತ ವಾಹನ‌ಚಿತ್ರದುರ್ಗಚಿರತೆ ಸಾವುಡಿಕ್ಕಿಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article