Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ: ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ದಿಢೀರ್ ಭೇಟಿ, ಪರಿಶೀಲನೆ

05:59 PM Jan 04, 2024 IST | suddionenews
Advertisement

ಚಿತ್ರದುರ್ಗ.ಜ.04:  ಪ್ರಸವಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ (ಪಿಸಿ & ಪಿಎನ್‍ಡಿಟಿ)ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸಕ್ಷಮ ಪ್ರಾಧಿಕಾರ ಹಾಗೂ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯು ಪಿಸಿ&ಪಿಎನ್‍ಡಿಟಿ ತಂಡದೊಂದಿಗೆ ಚಿತ್ರದುರ್ಗ ನಗರದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು, ಅಲ್ಲದೆ ಅಲ್ಲಿ ಕಂಡುಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡಿತು.

Advertisement

ಪಿಸಿ&ಪಿಎನ್‍ಡಿಟಿ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ರಾಜ್ಯ ಸಕ್ಷಮ ಪ್ರಾಧಿಕಾರ ಪಿಡಿಆರ್‍ಸಿಹೆಚ್ ಡಾ.ಶ್ರೀನಿವಾಸ್, ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯ ಅಧ್ಯಕ್ಷ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್ ಹಾಗೂ ಸಮಿತಿಯ ಸದಸ್ಯರಾದ ಡಾ. ಸತ್ಯನಾರಾಯಣ, ವಿಷಯ ನಿರ್ವಾಹಕ ಹೆಚ್.ಬಿ.ಪೂಜಾರ್ ಅವರು ಚಿತ್ರದುರ್ಗ ನಗರದ ಕೀರ್ತಿ ಹಾಸ್ಟಿಟಲ್, ಆಫಿಯಾ ಆಸ್ಪತ್ರೆ ಮತ್ತು ಹಿಂದ್ ಲ್ಯಾಬ್‍ನ  ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಪರಶೀಲನೆ ನಡೆಸಲಾಯಿತು.
ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷಿನ್‍ಗೆ ಸಂಬಂಧಿಸಿದಂತಹ ಎನ್‍ಎನ್‍ಸಿ ರಿಜಿಸ್ಟರ್, ರೆಫರಲ್ ಸ್ಲಿಪ್‍ಗಳು ಹಾಗೂ ಎಂಟಿಪಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಪರಿಶೀಲಿಸಲಾಯಿತು.

Advertisement
Advertisement
Tags :
chitradurgasurprise visitultrasound scanning centersಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ಚಿತ್ರದುರ್ಗದಿಢೀರ್ ಭೇಟಿಪರಿಶೀಲನೆ
Advertisement
Next Article