Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ದೊಡ್ಡಸಿದ್ದವ್ವನಹಳ್ಳಿ ಬಳಿ ಅಪಘಾತ ; ಓರ್ವನಿಗೆ ಗಾಯ

10:39 AM Jul 25, 2024 IST | suddionenews
Advertisement

ಸುದ್ದಿಒನ್, ಜುಲೈ. 25 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಬಳಿಯ ಪೂನಾ - ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬುಧವಾರ ರಾತ್ರಿ  ಅಪಘಾತ ಸಂಭವಿಸಿ ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಎರಡು ಲಾರಿಗಳು ಚತುಷ್ಪತ ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಹಿಂಬದಿಯಿಂದ ಓವರ್ ಟೇಕ್ ಮಾಡುವಾಗ ಮುಂದೆ ಚಲಿಸುತ್ತಿದ್ದ ಹಾಲಿನ ವಾಹನಕ್ಕೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡೂ ಲಾರಿಗಳು ನೆಲಕ್ಕುರುಳಿವೆ. ಅಪಘಾತದಲ್ಲಿ ಓರ್ವ ವ್ಯಕ್ತಿಯ ಕಾಲಿಗೆ ಗಂಭೀರವಾಗಿ ಪೆಟ್ಟಾಗಿದ್ದು ಆತನನ್ನು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Advertisement
Tags :
accidentbengaluruchitradurgaDoddasiddavanhallisuddionesuddione newsಅಪಘಾತಓರ್ವನಿಗೆ ಗಾಯಚಿತ್ರದುರ್ಗದೊಡ್ಡಸಿದ್ದವ್ವನಹಳ್ಳಿಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article