Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಹೊಸ ಹೈವೇಯಲ್ಲಿ ಅಪಘಾತ, ಇಬ್ಬರು ಸಾವು, ಮೂವರಿಗೆ ಗಾಯ

11:22 AM Jan 19, 2024 IST | suddionenews
Advertisement

 

Advertisement

 

ಸುದ್ದಿಒನ್, ಚಿತ್ರದುರ್ಗ, ಜನವರಿ.19 : ನಗರದ ಹೊರವಲಯದ ಹೊಸ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಕ್ಯಾದಿಗೆರೆ - ಸೀಬಾರ ಹೊಸ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದಕರಿಪುರದ ಬಳಿ ಇಂದು (ಶುಕ್ರವಾರ) ಬೆಳಿಗ್ಗೆ ಕಾರು ಹಾಗೂ ದೊಡ್ಡ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ಕಾರು ಮದಕರಿಪುರದ ಬಳಿ ಮುಂದೆ ಹೋಗುತ್ತಿದ್ದ ದೊಡ್ಡ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ಈ ಅಪಘಾತದಲ್ಲಿ ಬೆಂಗಳೂರು ಮೂಲದ ವಿನುತಾ (40) ಮತ್ತು ನಿರ್ಮಲಾ (55) ಎಂಬುವವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಫಣಿರಾಜ್, ರಶ್ಮಿ, ಯಶಸ್ ಅವರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Advertisement
Tags :
2 killed3 injuredaccidentchitradurgahighwaysuddioneಅಪಘಾತಇಬ್ಬರುಗಾಯಚಿತ್ರದುರ್ಗಮೂವರುಸಾವುಸುದ್ದಿಒನ್ಹೊಸ ಹೈವೇ
Advertisement
Next Article