For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ನಗರ ಆಶ್ರಯ ಸಮಿತಿ ಸದಸ್ಯರಾಗಿ ಶ್ರೀಮತಿ ಮುನಿರಾ ಎ.ಮಕಾಂದಾರ್ ನೇಮಕ

05:47 PM Jul 10, 2024 IST | suddionenews
ಚಿತ್ರದುರ್ಗ   ನಗರ ಆಶ್ರಯ ಸಮಿತಿ ಸದಸ್ಯರಾಗಿ ಶ್ರೀಮತಿ ಮುನಿರಾ ಎ ಮಕಾಂದಾರ್ ನೇಮಕ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ.10 : ನಗರ ಆಶ್ರಯ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮುನಿರಾ ಎ.ಮಕಾಂದಾರ್ ಇವರಿಗೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೇಮಕ ಪತ್ರ ವಿತರಿಸಿದರು.

Advertisement

ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೇ ಐದು ಉಚಿತ ಗ್ಯಾರೆಂಟಿಗಳನ್ನು ನೀಡಿದ್ದಾರೆ. ನಿಮಗೆ ಸಿಕ್ಕಿರುವ ಅವಕಾಶವನ್ನು ಬಡವರ ಸೇವೆಗೆ ಬಳಸಿಕೊಳ್ಳಿ ಎಂದು ಮುನಿರಾ ಎ.ಮಕಾಂದಾರ್‍ಗೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಸೂಚಿಸಿದರು.

Advertisement
Advertisement

ನನ್ನ ಮೇಲೆ ನಂಬಿಕೆಯಿಟ್ಟು ಆಶ್ರಯ ಸಮಿತಿ ಸದಸ್ಯೆಯನ್ನಾಗಿ ನೇಮಕ ಮಾಡಿದ್ದೀರ. ನಿಮ್ಮ ನಂಬಿಕೆಗೆ ಧಕ್ಕೆ ಬರದ ರೀತಿಯಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಬಡವರಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆಂದು ಮುನಿರಾ ಎ.ಮಕಾಂದಾರ್ ಭರವಸೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಗ್ಯಾರೆಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮೋಕ್ಷರುದ್ರಸ್ವಾಮಿ, ಸೇವಾದಳ ಮಹಿಳಾಧ್ಯಕ್ಷೆ ಇಂದಿರಾ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Tags :
Advertisement