ಚಿತ್ರದುರ್ಗ | ಆಗಸ್ಟ್ 26ರಂದು ಶ್ರೀಕೃಷ್ಣ ಜಯಂತಿ
ಚಿತ್ರದುರ್ಗ. ಆ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಇದೇ ಆಗಸ್ಟ್ 26ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಶ್ರೀ ಕೃಷ್ಣ ವೃತ್ತದಲ್ಲಿ ಕೃಷ್ಣ ಜಯಂತಿ ಆಚರಣೆ ಸಮಾರಂಭ ಆಯೋಜಿಸಲಾಗಿದೆ.
ಚಿತ್ರದುರ್ಗದ ಅಖಿಲ ಭಾರತ ಯಾದವ ಗುರುಪೀಠದ ಕೃಷ್ಣ ಯಾದವನಂದ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ ಕಾರಜೋಳ, ಹೊಸದುರ್ಗ ಶಾಸಕರು ಹಾಗೂ ಅಹಾರ ಮತ್ತು ನಾಗರೀಕ ಸರಬರಾಜು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ಸಣ್ಣ ಕೈಗರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಅನ್ವರ್ ಭಾಷಾ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‌ಪೀರ್, ಜಿಲ್ಲಾ ಯಾದವ ಸಂಘ ಅಧ್ಯಕ್ಷ ಸಿ.ಮಹಾಲಿಂಗಪ್ಪ, ಕಾರ್ಯದರ್ಶಿ ಬಿ.ಆನಂದ ಸೇರಿದಂತೆ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು, ಯಾದವ ಸಮಾಜದ ಮುಖಮಡರು ಹಾಗೂ ಗಣ್ಯರು ಭಾಗವಹಿಸುವರು.
ನಿವೃತ್ತ ಪ್ರಾಧ್ಯಾಪಕ ಪ್ರೊ.ಜಿ.ಪರಮೇಶ್ವರಪ್ಪ ಉಪನ್ಯಾಸ ನೀಡುವರು. ಚಿತ್ರದುರ್ಗ ತಾಲ್ಲೂಕು ಆಯಿತೋಳು ಮಾರುತೇಶ್ ಮತ್ತು ತಂಡದವರಿಂದ ಗೀತ ಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.