Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಶಾಸಕ ಬಿ.ಜಿ. ಗೋವಿಂದಪ್ಪ, ಟಿ. ರಘುಮೂರ್ತಿ ಸೇರಿದಂತೆ 32 MLA ಗಳಿಗೆ ನಿಗಮ ಮಂಡಳಿ ಪಟ್ಟ

06:44 PM Jan 26, 2024 IST | suddionenews
Advertisement

ಸುದ್ದಿಒನ್, ಬೆಂಗಳೂರು : ಕಾಂಗ್ರೆಸ್ ನಲ್ಲಿ ನಿಗಮ ಮಂಡಳಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕಾತಿಯೇ ಕಗ್ಗಂಟಾಗಿ ಉಳಿದಿತ್ತು. ಸಿಎಂ ಮತ್ತು ಡಿಸಿಎಂ ನಡುವೆ ಹಗ್ಗಜಗ್ಗಾಟ ನಡೆಯುತ್ತಲೆ ಇತ್ತು. ಕಾರ್ಯಕರ್ತರು, ಶಾಕಸರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಸಿಗುತ್ತೆ ಎಂದಾಗ ಹಲವರ ನಿರೀಕ್ಷೆ ಹೆಚ್ಚಾಗಿತ್ತು. ಇದರ ನಡುವೆ ಕಾದು ಕಾದು ಹಲವರು ಸುಸ್ತಾಗಿದ್ದರು. ಇದೀಗ ಕಡೆಗೂ ನಿಗಮ ಮಂಡಳಿ ಸ್ಥಾನವನ್ನು ಫೈನಲ್ ಮಾಡಲಾಗಿದೆ.

Advertisement

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಮತ್ತು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಸೇರಿದಂತೆ 32 ಶಾಸಕರನ್ನು ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಬಿ.ಜಿ.ಗೋವಿಂದಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಮತ್ತು ಟಿ.ರಘುಮೂರ್ತಿ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ ಸ್ಥಾನ ಲಭಿಸಿದೆ.

Advertisement

ಈ ಮೊದಲು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ನಿಗಮ ಮಂಡಳಿ ಸ್ಥಾನ ಬೇಡ ಎಂದು ಹೇಳುತ್ತಲೇ ಬಂದಿದ್ದರು. ಅದೇ ರೀತಿ ಚಳ್ಳಕೆರೆ ಶಾಸಕ ಟಿ ರಘುಮೂರ್ತಿಯವರು ಕೂಡಾ ನನಗೆ ಯಾವುದೇ ನಿಗಮ ಮಂಡಳಿ ಸ್ಥಾನ ಬೇಡ ಎಂದು ಸಿಎಂ ಮತ್ತು ಡಿಸಿಎಂ ಗೆ ಪತ್ರ ಬರೆದಿದ್ದರು. ಇದೆಲ್ಲದರ ನಡುವೆ ಇವರಿಬ್ಬರಿಗೆ ನಿಗಮ ಮಂಡಳಿ ಸ್ಥಾನ ಲಭಿಸಿದೆ. ಮುಂದಿನ ದಿನಗಳಲ್ಲಿ ಇವರಿಬ್ಬರೂ ಅಧಿಕಾರ ಸ್ವೀಕರಿಸುತ್ತಾರಾ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ಅದರಲ್ಲಿ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್,  ಹಂಪನಗೌಡ ಬಾದರ್ಲಿ ಅವರಿಗೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ, ಅಪ್ಪಾಜಿ ಸಿ.ಎಸ್.ನಾಡಗೌಡ ಅವರಿಗೆ ಕೆಎಸ್​ಡಿಎಲ್, ರಾಜು ಕಾಗೆ ಅವರಿಗೆ ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ) ನೀಡಿದ್ದಾರೆ.

ಹೆಚ್.ವೈ.ಮೇಟಿ - ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

ಎಸ್.ಆರ್.ಶ್ರೀನಿವಾಸ - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬಸವರಾಜ ನೀಲಪ್ಪ ಶಿವಣ್ಣನವರ್ - ಅರಣ್ಯ ಅಭಿವೃದ್ಧಿ ನಿಗಮ

ಎಚ್.ಸಿ.ಬಾಲಕೃಷ್ಣ - ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಜಿ.ಎಸ್.ಪಾಟೀಲ್ - ಖನಿಜ ಅಭಿವೃದ್ಧಿ ನಿಗಮ ನಿಯಮಿತ

ಎನ್.ಎ.ಹ್ಯಾರಿಸ್ - ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಕೌಜಲಗಿ ಮಹಾಂತೇಶ್ ಶಿವಾನಂದ - ಹಣಕಾಸು ಸಂಸ್ಥೆ

ಬೀಳಗಿ ಶಾಸಕ ಜೆ.ಟಿ.ಪಾಟೀಲ್ - ಹಟ್ಟಿ ಚಿನ್ನದ ಗಣಿ

ರಾಜಾ ವೆಂಕಟಪ್ಪ ನಾಯಕ - ಕರ್ನಾಟಕ ರಾಜ್ಯ ಉಗ್ರಾಣ ನಿಗಮ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ -ಲ್ಯಾಂಡ್ ಆರ್ಮಿ

ಕೆ.ಎಂ.ಶಿವಲಿಂಗೇಗೌಡ - ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್ - ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

ಬೇಳೂರು ಗೋಪಾಲಕೃಷ್ಣ - ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

ಎಸ್.ಎನ್.ನಾರಾಯಣಸ್ವಾಮಿ - ಕೆಯುಡಿಐಸಿ ಮತ್ತು ಎಫ್​ಸಿ

ಪಿ.ಎಂ.ನರೇಂದ್ರಸ್ವಾಮಿ - ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಟಿ.ರಘುಮೂರ್ತಿ - ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

ರಮೇಶ್ ಬಾಬು ಬಂಡಿಸಿದ್ದೇಗೌಡ - ಚೆಸ್ಕಾಂ

ಬಿ.ಶಿವಣ್ಣ - ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಎಸ್.ಎನ್.ಸುಬ್ಬಾರೆಡ್ಡಿ - ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ವಿನಯ ಕುಲಕರ್ಣಿ - ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು - ಜಂಗಲ್ ಲಾಡ್ಜಸ್

ಬಸನಗೌಡ ದದ್ದಲ್ - ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಖನೀಜ್ ಫಾತಿಮಾ - ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

ವಿಜಯಾನಂದ ಕಾಶಪ್ಪನರ್ - ಕರ್ನಾಟಕ ಕ್ರೀಡಾ ಪ್ರಾಧಿಕಾರ

ಶ್ರೀನಿವಾಸ ಮಾನೆ - ಡಿಸಿಎಂ ರಾಜಕೀಯ ಸಲಹೆಗಾರ

ಟಿ.ಡಿ.ರಾಜೇಗೌಡ - ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

ಎಂ.ರೂಪಕಲಾ -ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ ನೇಮಕ ಮಾಡಲಾಗಿದೆ.

Advertisement
Tags :
32 MLAs32 ಶಾಸಕರುB.G. GovindappaChairmanshipchitradurgaCorporation boardMLA B.G. GovindappaMla t. Raghumurthysuddionesuddione newsT. Raghumurthyಅಧ್ಯಕ್ಷಅಧ್ಯಕ್ಷ ಸ್ಥಾನಚಿತ್ರದುರ್ಗಟಿ.ರಘುಮೂರ್ತಿನಿಗಮ ಮಂಡಳಿಬಿ.ಜಿ.ಗೋವಿಂದಪ್ಪಬೆಂಗಳೂರುಶಾಸಕ ಟಿ.ರಘುಮೂರ್ತಿಶಾಸಕ ಬಿ.ಜಿ.ಗೋವಿಂದಪ್ಪಶಾಸಕರುಸುದ್ದಿಒನ್ಸುದ್ದಿಒನ್ ನ್ಯೂಸ್ಸ್ಥಾನ
Advertisement
Next Article