For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿ.ಐ.ಟಿ.ಯು. ಪ್ರತಿಭಟನೆ

06:53 PM Sep 21, 2024 IST | suddionenews
ಚಿತ್ರದುರ್ಗ   ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿ ಐ ಟಿ ಯು  ಪ್ರತಿಭಟನೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಕೊಲ್ಕತ್ತಾದಲ್ಲಿ ಟೈನಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವವರನ್ನು ಕಠಿಣ ಶಿಕ್ಷೆಗೊಳಪಡಿಸಿ ನಿಸ್ಪಕ್ಷಪಾತ ತನಿಖೆ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿ.ಐ.ಟಿ.ಯು. ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಿ ನರೇಂದ್ರಮೋದಿಗೆ ಮನವಿ ಸಲ್ಲಿಸಲಾಯಿತು.

Advertisement

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ತಡೆಗಟ್ಟಲು

Advertisement

ಕಾನೂನು ಮತ್ತು ಆಡಳಿತ ವ್ಯವಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಅತ್ಯಾಚಾರ ಮತ್ತು ಲೈಂಗಿಕ ಹಿಂಸೆಗೆ ಸಂಬಂಧಿಸಿದಂತೆ ಎಲ್ಲಾ ಪ್ರಕರಣಗಳನ್ನು ತ್ವರಿತ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಿ ಫಾಸ್ಟ್‍ಟ್ರ್ಯಾಕ್ ವಿಶೇಷ ನ್ಯಾಯಾಲಯಗಳನ್ನು ತೆರೆಯಬೇಕು. ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ನ್ಯಾಯಮೂರ್ತಿ ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೊಳಿಸುವುದರ ಜೊತೆಗೆ ಶುದ್ದವಾದ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಮಹಿಳೆಯರ ಸಬಲೀಕರಣಕ್ಕಾಗಿ ರೂಪಿಸಲಾಗಿರುವ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಬಜೆಟ್‍ನಲ್ಲಿ ಹೆಚ್ಚಿನ ಹಣ ಮೀಸಲಿಡಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿ.ಐ.ಟಿ.ಯು. ಸಂಚಾಲಕ ಸಿ.ಕೆ.ಗೌಸ್‍ಪೀರ್ ಹಾಗೂ ಡಿ.ಎಂ.ಮಲಿಯಪ್ಪ ಇವರುಗಳು ಆಗ್ರಹಿಸಿದರು.

ನಿಂಗಮ್ಮ ಎನ್. ಇಂದ್ರಮ್ಮ, ನಿರ್ಮಲಮ್ಮ, ಬಿ.ಬೋರಮ್ಮ, ಮಂಜಮ್ಮ, ಜಯಲಕ್ಷ್ಮಿ, ತನುಜ, ಶಿವಮ್ಮ, ಗೌರಮ್ಮ, ಪಾರ್ವತಮ್ಮ, ವೀಣ, ರಾಜಮ್ಮ, ಟಿ.ತಿಪ್ಪೇಸ್ವಾಮಿ, ಟಿ.ನಿಂಗಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags :
Advertisement