Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ನಗರಸಭಾ ಚುನಾವಣೆ | ಬಿಜೆಪಿಯ ನಾಲ್ವರು ನಗರಸಭಾ ಸದಸ್ಯರು ಉಚ್ಚಾಟನೆ

05:32 PM Sep 16, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 16 : ನಗರಸಭೆಯ ಅಧ್ಯಕ್ಷ ಮತ್ತು ಉಪಾದ್ಯಕ್ಷ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಬಿಜೆಪಿ ನಗರಸಭಾ ಸದಸ್ಯರನ್ನು ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ ಆದೇಶಿಸಿದ್ದಾರೆ.

1 ನೇ ವಾರ್ಡಿನ ಸದಸ್ಯೆ ನಾಗಮ್ಮ,
17 ನೇ ವಾರ್ಡಿನ ಸದಸ್ಯ ಜಯ್ಯಪ್ಪ,
30 ನೇ ವಾರ್ಡಿನ ಸದಸ್ಯ ಮಂಜಣ್ಣ ಮತ್ತು
33 ನೇ ವಾರ್ಡಿನ ಸದಸ್ಯೆ ಶ್ರೀದೇವಿ ಚಕ್ರವರ್ತಿ ಅವರು ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡ ಸದಸ್ಯರು.

Advertisement

ಆಗಸ್ಟ್ 26 ರಂದು ನಡೆದ ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ವಿಪ್ ಜಾರಿ ಮಾಡಿದ್ದರೂ ಸಹಾ ವಿಪ್ ಅನ್ನು ಕಡೆಗಣಿಸಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ‌ ಎಂದು ಜಿಲ್ಲಾಧ್ಯಕ್ಷ ಎ. ಮುರಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
bengaluruBjpchitradurgacityCity Council ElectioncouncilorsExpelledsuddionesuddione newsಉಚ್ಚಾಟನೆಚಿತ್ರದುರ್ಗನಗರಸಭಾ ಚುನಾವಣೆನಗರಸಭೆಬಿಜೆಪಿಬೆಂಗಳೂರುಸದಸ್ಯರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article