Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಸ್ವಚ್ಚತೆ ಹಾಗೂ ಡೆಂಗ್ಯೂ ಜಾಗೃತಿ

07:47 PM Jul 08, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.08  : ಕೆಳಗೋಟೆ ಚನ್ನಕೇಶವಪುರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸ್ವಚ್ಚತೆ ಹಾಗೂ ಡೆಂಗ್ಯೂ ಕುರಿತು ಸೋಮವಾರ ಜಾಗೃತಿ ಜಾಥ ನಡೆಸಲಾಯಿತು.

Advertisement

ನಗರಸಭೆ ಪೌರಾಯುಕ್ತರಾದ ಶ್ರೀಮತಿ ರೇಣುಕಾರವರು ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಶೌಚಾಲಯ ಬಳಸಿ ರೋಗ ಓಡಿಸಿ, ಸ್ವಚ್ಚತೆ ಕಾಪಾಡಿ ಡೆಂಗ್ಯೂ ನಿಯಂತ್ರಿಸಿ ಎಂದು ಮಕ್ಕಳಿಗೆ ತಿಳಿಸಿದರು.
ಎಲ್ಲೆಡೆ ಡೆಂಗ್ಯೂ ಜ್ವರ ಹರಡುತ್ತಿರುವುದರಿಂದ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡು ಸೊಳ್ಳೆಗಳನ್ನು ನಿರ್ಮೂಲನೆ ಮಾಡಬೇಕಿದೆ ಎಂದರು.

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರವನ್ನು ಸಂರಕ್ಷಿಸಬೇಕಾಗಿದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ಹಸಿರು ಪರಿಸರವೇ ಇಲ್ಲದಂತಾಗುತ್ತದೆ. ಗಿಡ ನೆಡುವುದು ಮುಖ್ಯವಲ್ಲ ಜೋಪಾನವಾಗಿ ಕಾಪಾಡಿ ದೊಡ್ಡ ಮರವನ್ನಾಗಿ ಬೆಳೆಸಬೇಕೆಂದರು.

ನಗರಸಭೆ ಹೆಲ್ತ್‌ ಇನ್ಸ್‌ಪೆಕ್ಟರ್ ಗಳಾದ ಸರಳ, ಭಾರತಿ, ನಾಗರಾಜ್, ಪರಿಸರ ಇಂಜಿನಿಯರ್ ಜಾಫರ್, ಮುಖ್ಯ ಶಿಕ್ಷಕಿ ಧನಲಕ್ಷ್ಮಿ ಹಾಗೂ ಪೌರ ನೌಕರರು ಜಾಥದಲ್ಲಿ ಭಾಗವಹಿಸಿದ್ದರು.

Advertisement
Tags :
bengaluruchildren in government schoolschitradurgaCleanlinessDengue Awarenesssuddionesuddione newsಚಿತ್ರದುರ್ಗಡೆಂಗ್ಯೂ ಜಾಗೃತಿಬೆಂಗಳೂರುಮಕ್ಕಳಿಗೆ ಸ್ವಚ್ಚತೆಸರ್ಕಾರಿ ಶಾಲೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article