Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಓ.ಪಿ.ಎಸ್. ಪದ್ದತಿ ಜಾರಿಮಾಡುವಂತೆ ಒತ್ತಾಯಿಸಿ ನೌಕರರ ಸಂಘದಿಂದ ಪ್ರತಿಭಟನೆ

05:28 PM Aug 17, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಎನ್.ಪಿ.ಎಸ್. ಪದ್ದತಿ ರದ್ದುಗೊಳಿಸಿ ಓ.ಪಿ.ಎಸ್. ಜಾರಿಗೆ ತರುವಂತೆ ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Advertisement

ಕರ್ನಾಟಕ ಖಾಸಗಿ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳ (ವೇತನ, ನಿವೃತ್ತಿ ವೇತನ, ಇತರೆ ಸೌಲಭ್ಯಗಳ ನಿಯಂತ್ರಣ) ವಿಧೇಯಕ 2014 ಕ್ಕೆ ತಿದ್ದುಪಡಿ ತಂದು ಅಥವಾ ರದ್ದುಪಡಿಸಿ ಭವಿಷ್ಯವರ್ತಿಯಾಗಿ ಜಾರಿಗೆ ಬರುವಂತೆ ಕ್ರಮ ವಹಿಸುವ ಮೂಲಕ ದಿನಾಂಕ : 1-4-2006 ರ ಪೂರ್ವದಲ್ಲಿ ನೇಮಕವಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರ ಅನುದಾನಕ್ಕೂ ಪೂರ್ವದ ಸೇವೆಯನ್ನು ಕೇವಲ ಪಿಂಚಣಿ ಸೌಲಭ್ಯಕ್ಕೆ ಮಾತ್ರ ಪರಿಗಣಿಸಿ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಜಿ.ಹನುಮಂತಪ್ಪ, ಕೆ.ಜಿ.ವಸಂತಕುಮಾರ್, ನಾಗೇಶ್ ಇನ್ನು ಅನೇಕರು ಪ್ರತಿಭಟನೆಯಲ್ಲಿದ್ದರು.

Advertisement
Tags :
bengaluruchitradurgademanding implementationEmployees UnionOPS systemProtestsuddionesuddione newsಓ.ಪಿ.ಎಸ್. ಪದ್ದತಿಚಿತ್ರದುರ್ಗನೌಕರರ ಸಂಘಪ್ರತಿಭಟನೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article