For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಮನೆ ಮನೆಗೆ ಗಂಗೆ ಪ್ರಚಾರಾಂದೋಲಕ್ಕೆ ಚಾಲನೆ

05:59 PM Oct 26, 2024 IST | suddionenews
ಚಿತ್ರದುರ್ಗ   ಮನೆ ಮನೆಗೆ ಗಂಗೆ ಪ್ರಚಾರಾಂದೋಲಕ್ಕೆ ಚಾಲನೆ
Advertisement

ಚಿತ್ರದುರ್ಗ.ಅ.26: ಪ್ರತಿ ಮನೆಗೆ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಕಲ್ಪಿಸುವ "ಮನೆ ಮನೆಗೆ ಗಂಗೆ" ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ ರೀಡ್ಸ್ ಇವರ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಮಾಹಿತಿ ಶಿಕ್ಷಣ ಹಾಗೂ ಸಂವಹನ ಚಟುವಟಿಕೆಯ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Advertisement

ಆಟೋ ಪ್ರಚಾರ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವ ಬಗ್ಗೆ, ಕಲುಷಿತ ನೀರು ಸೇವನೆಯಿಂದ ಆಗುವ ಪರಿಣಾಮ, ಕ್ಷೇತ್ರ ಪರೀಕ್ಷಾ ಕಿಟ್ (ಎಫ್ ಟಿ ಕೆ) ಬಳಸಿ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೈಗೊಳ್ಳುವುದು, ಶುಚಿತ್ವ, ಬೂದು ನೀರು ನಿರ್ವಹಣೆ, ಮಳೆ ನೀರು ಕೊಯ್ಲು, ಪ್ಲಾಸ್ಟಿಕ್ ನಿಷೇದ, ಶೌಚಾಲಯ ಬಳಸುವುದು, ಹಸಿ ಕಸ, ಒಣ ಕಸ ವಿಂಗಡನೆ ಕುರಿತು ಪ್ರತಿ ಗ್ರಾಮದಲ್ಲಿ ಆಟೋ ಪ್ರಚಾರ ಮಾಡಲಾಗುತ್ತಿದೆ.

Advertisement

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ್ ಎಸ್ ನಾಡರ, ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆಯ ತಂಡದ ನಾಯಕರಾದ ಜಿ.ಎಸ್. ನಾಗರಾಜ, ಪ್ರತಾಪ, ರಘುಪತಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.

Advertisement

Advertisement
Tags :
Advertisement