For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಕಣ್ಮನ ಸೆಳೆದ ಮುರುಘಾಮಠದ ಯೋಗ ನಡಿಗೆ : ವಿವಿಧ ಮಠಾಧೀಶರು, ಪ್ರಮುಖ ಗಣ್ಯರು ಭಾಗಿ

07:48 PM Jun 19, 2024 IST | suddionenews
ಚಿತ್ರದುರ್ಗ   ಕಣ್ಮನ ಸೆಳೆದ ಮುರುಘಾಮಠದ ಯೋಗ ನಡಿಗೆ   ವಿವಿಧ ಮಠಾಧೀಶರು  ಪ್ರಮುಖ ಗಣ್ಯರು ಭಾಗಿ
Advertisement

ಸುದ್ದಿಒನ್, ಚಿತ್ರದುರ್ಗ, ಜೂ.19  : ಯೋಗವನ್ನು ಯಾವುದೇ ಒಂದು ಧರ್ಮಕ್ಕೆ ಸೀಮಿತಗೊಳಿಸಬಾರದು. ಯೋಗ ವ್ಯಕ್ತಿಯ ಮನಸ್ಸು ಮತ್ತು ದೇಹದ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುತ್ತದೆ ಎಂದು ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು ಹೇಳಿದರು.

Advertisement


ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ನಡೆದ ಯೋಗ ನಡಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತ, ಆರೋಗ್ಯದ ದೃಷ್ಟಿಯಿಂದ ಯೋಗ ಇರಬೇಕು. ಇಂದಿನ ದಿನಮಾನಗಳಲ್ಲಿ ಒತ್ತಡದ ಬದುಕು. ಇದರಿಂದ ಬಿಡುಗಡೆ ಹೊಂದಲು ಒಂದಷ್ಟು ಸಮಯ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಟ್ಟುಕೊಂಡು ಬದುಕಬೇಕಿದೆ. ಯೋಗವು ಆರೋಗ್ಯಕರ. ದೇಹದಲ್ಲಿ ಆರೋಗ್ಯಕರ ಮನಸ್ಸಿನ ಗುರಿಯನ್ನು ಹೊಂದುವುದು ಜೀವನ ವಿಧಾನವಾಗಿದೆ. ಮನುಷ್ಯ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಜೀವಿ. ಜೀವನ ವಿಧಾನದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಯೋಗವು ಸಹಾಯ ಮಾಡುತ್ತದೆ. ಇಂದಿನ ಯೋಗ ನಡಿಗೆಗೆ ಒಂದಷ್ಟು ಅರ್ಥ ಸಿಕ್ಕಿದೆ ಎಂದರು.


ಶ್ರೀ ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಮಾತನಾಡಿ, ಆರೋಗ್ಯಪೂರ್ಣ ಮನಸ್ಸಿದ್ದರೆ ಪ್ರಬುದ್ಧ ಸಮಾಜ ನಿರ್ಮಿಸಲು ಸಾಧ್ಯ. ಕಳೆದ ಕೆಲವು ವರ್ಷಗಳಿಂದ ಯೋಗದ ಬಗ್ಗೆ ವಿಶ್ವವ್ಯಾಪಿ ವ್ಯಾಪಕ ಚರ್ಚೆಯಾಗುತ್ತಿದೆ. ಇದು ಪ್ರಪಂಚದಾದ್ಯಂತ ಹರಡಿದೆ. ಯೋಗವೆಂದರೆ ದೇಹವನ್ನು ಬಗ್ಗಿಸುವುದು ಅಥವಾ ತಿರುಗಿಸುವುದು ಮತ್ತು ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಮಾತ್ರವಲ್ಲ. ನಮ್ಮ ವಾಸ್ತವವನ್ನು ನೋಡುವ ಮತ್ತು ಅನುಭವಿಸುವ ಸ್ಥಿತಿಗೆ ನಮ್ಮನ್ನು ತರಲು ಇದೊಂದು ವಿಧಾನವಾಗಿದೆ. ನಮ್ಮ ಶಕ್ತಿಗಳ ಉತ್ಕøಷ್ಟ ಭಾವ ಪರವಶವಾಗಲು ನಮ್ಮನ್ನು ಸಕ್ರಿಯಗೊಳಿಸಬೇಕು. ಆಗ ನಮ್ಮ ಸಂವೇದನಾಶೀಲವು ವಿಸ್ತಾರವಾಗುತ್ತದೆ. ಯೋಗವು ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಆತಂಕ, ಹೃದಯಸಂಬಂಧಿ ಕಾಯಿಲೆಗಳ ಆಪಾಯವನ್ನು ಕಡಿಮೆ ಮಾಡುತ್ತದೆ. ದೇಹ ಮತ್ತು ಮನಸ್ಸಿನ ನಡುವೆ ಸಾಮರಸ್ಯವನ್ನು ಆದರ್ಶೀಕರಿಸುವಲ್ಲಿ ಯೋಗವು ನೆರವಾಗುತ್ತದೆ ಎಂದರು.

Advertisement


ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಮಾತನಾಡಿ, ಪ್ರಪಂಚಕ್ಕೆ ಮಾದರಿಯಾದುದು ಈ ಯೋಗ. ಪ್ರಪಂಚದಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ. ಪೂಜ್ಯರ ನೇತೃತ್ವದಲ್ಲಿ ಯೋಗ ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದು ನನ್ನ ಪುಣ್ಯ. ಉತ್ತಮ ಆರೋಗ್ಯಕ್ಕಾಗಿ ಯೋಗ ಮತ್ತು ನಡಿಗೆ ಮಾಡಬೇಕು. ಇಂತಹ ಜಾಗೃತಿ ಕಾರ್ಯಕ್ರಮಗಳು ಇತರರಿಗೆ ಪ್ರೇರಣೆ ಆಗಿದೆ ಎಂದರು.


ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಯೋಗ ಭಾರತದ ಸಂಸ್ಕøತಿಯ ಪ್ರತೀಕ. ದೇಹ ಮತ್ತು ಮನಸ್ಸು ಒಂದಾಗುವ ಪ್ರಕ್ರಿಯೆಯೇ ಯೋಗ. ಅದಕ್ಕೆ ಇಂದಿನ ಯೋಗ ನಡಿಗೆಯೇ ಸಾಕ್ಷಿ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜಪೀರ್ ಮಾತನಾಡಿ, ಯೋಗ ಒಂದು ದಿನಕ್ಕೆ ಸೀಮಿತ ಆಗಬಾರದು. ನಿತ್ಯವೂ ಇಂತಹ ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು. ನಮ್ಮ ಆರೋಗ್ಯ ನಮ್ಮ ಕೈಲಿದೆ. ಚಟಗಳು ನಮ್ಮನ್ನು ಅನಾರೋಗ್ಯದ ಕಂದಕಕ್ಕೆ ತಳ್ಳುತ್ತವೆ. ಎಲ್ಲರೂ ದುಶ್ಚಟಗಳಿಂದ ದೂರವಿರಬೇಕು. ಇದು ಕುಟುಂಬಕ್ಕೆ ಮತ್ತು ಸಮಾಜಕ್ಕೆ ಒಳ್ಳೆಯದು ಎಂದರು.


ಕೆಡಿಪಿ ಸದಸ್ಯ ಕೆ.ಸಿ. ನಾಗರಾಜು ಮಾತನಾಡಿದರು.
ಇದಕ್ಕು ಮುನ್ನ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು ಪೂರ್ವಭಾವಿಯಾಗಿ ಆಯೋಜಿಸಿದ್ದ ಯೋಗ ನಡಿಗೆ (ಜಾಥಾ)ಯನ್ನು ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮಿಗಳು ನಗಾರಿ ಬಾರಿಸುವುದರ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು ಗುರುಮಠಕಲ್, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮಿಗಳು, ಶ್ರೀ ಬಸವನಾಗಿದೇವ ಸ್ವಾಮಿಗಳು, ಶ್ರೀ ಶಿವಾನಂದ ಸ್ವಾಮಿಗಳು ಸಾಯಿಗಾಂವ, ಶ್ರೀ ಇಮ್ಮಡಿ ಬಸವ ಕೇತೇಶ್ವರ ಸ್ವಾಮಿಗಳು, ಶ್ರೀ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮಿಗಳು ಬಳ್ಳೆಕಟ್ಟೆ, ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮಿಗಳು ತೆಲಸಂಗ, ಶ್ರೀ ತಿಪ್ಪೇರುದ್ರ ಸ್ವಾಮಿಗಳು, ಸಂಸದ ಗೋವಿಂದ ಎಂ.ಕಾರಜೋಳ, ನಗರಸಭೆ ಆಯುಕ್ತರಾದ ಶ್ರೀಮತಿ ರೇಣುಕ, ಕೆಇಬಿ ಷಣ್ಮುಖಪ್ಪ, ಸುರೇಶ್‍ಬಾಬು, ಸಿದ್ದವ್ವನಹಳ್ಳಿ ಪರಮೇಶ್, ಡಿ.ಎಸ್. ಮಲ್ಲಿಕಾರ್ಜುನ್, ಪಿ.ವೀರೇಂದ್ರಕುಮಾರ್,  ರಾಜಕೀಯ ಧುರೀಣರು, ಅಧಿಕಾರಿಗಳು, ವಿವಿಧ ಸಮಾಜಗಳು ಸಂಘಸಂಸ್ಥೆಗಳ ಮುಖಂಡರು, ಶ್ರೀಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಶಾಲಾ-ಕಾಲೇಜುಗಳ ನೌಕರ ವರ್ಗದವರು, ಸಹಸ್ರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಾಥಾವು ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಬೆಳಗ್ಗೆ 7.30ಕ್ಕೆ ಆರಂಭಗೊಂಡು ಒನಕೆಓಬವ್ವ ಸರ್ಕಲ್‍ನಲ್ಲಿ ಸಮಾಪ್ತಿಗೊಂಡಿತು. ಜಾಥಾಕ್ಕೆ ಬಂದ ಸಕಲರಿಗೂ ಶ್ರೀಮಠದಿಂದ ಡಿ.ಸಿ. ಆಫೀಸ್ ಸರ್ಕಲ್‍ನಲ್ಲಿ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

Tags :
Advertisement