Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಭೀಕರ ಅಪಘಾತದಲ್ಲಿ  ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು

08:40 AM Jan 25, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.25 : ಬೆಳ್ಳಂಬೆಳಿಗ್ಗೆಯೇ ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.

Advertisement

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಿಳಿ ಈ ದುರಂತ ಸಂಭವಿಸಿದೆ.  2 ವರ್ಷದ ಸಿಂಧುಶ್ರೀ, 5 ತಿಂಗಳ ಹಸುಗೂಸು  ಅಯ್ಯಾಳಪ್ಪ, 3 ತಿಂಗಳ ಹಸುಗೂಸು ರಕ್ಷಾ‌ ಮತ್ತು 25 ವರ್ಷದ ಲಿಂಗಪ್ಪ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಳ್ಳಿಯ ನಿವಾಸಿಗಳು ಎಂದು ತಿಳಿದುಬಂದಿದೆ‌. ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತ ನಡೆದಿದ್ದು ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement

Advertisement
Tags :
chitradurgadiedfour membersroad accidentsame familysuddioneTerrible accidentಒಂದೇ ಕುಟುಂಬಚಿತ್ರದುರ್ಗನಾಲ್ವರು ಸಾವುಭೀಕರ ಅಪಘಾತಮೂವರು ಮಕ್ಕಳುಸುದ್ದಿಒನ್
Advertisement
Next Article