Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ

06:51 PM Sep 12, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ನೆಹರು ಯುವ ಕೇಂದ್ರ, ರೋಟರಿ ಕ್ಲಬ್ ಚಿನ್ಮುಲಾದ್ರಿ, ಬಸಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ನೀಲಕಂಠಯ್ಯ ಮೆಮೋರಿಯಲ್ ಪ್ಯಾರಾ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಮಕ್ಕಳಿಗೆ ಉಚಿತ ರಕ್ತದ ಗುಂಪಿನ ತಪಾಸಣೆ, ರಕ್ತದಾನ ಶಿಬಿರ, ಆರೋಗ್ಯ ಮತ್ತು ನೇತ್ರ ತಪಾಸಣೆ ನಡೆಸಲಾಯಿತು.

Advertisement

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಾಳಪ್ಪನಹಟ್ಟಿ ಈಶ್ವರಪ್ಪನವರ ಎಪ್ಪತ್ತನೆ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಪ ಸಭಾಪತಿ ಈ.ಅರುಣ್‍ಕುಮಾರ್ 41 ನೇ ಬಾರಿಗೆ ರಕ್ತದಾನ ಮಾಡಿದರು.

ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಕಾರ್ಯದರ್ಶಿ ಮಜಹರ್‍ಉಲ್ಲಾ, ಮಂಜುನಾಥ್ ಭಾಗವತ್, ಗಣೇಶಯ್ಯ, ನೆಹರು ಯುವ ಕೇಂದ್ರದ ಸುಹಾಸ್, ಗುರುಮೂರ್ತಿ, ಮಾರುತಿ, ಅಶೋಕ್, ಕಿರಣ್, ವೈದ್ಯರುಗಳಾದ ರವಿ, ನವೀನ್‍ಸಜ್ಜನ್, ಶಿಲ್ಪ, ರೂಪ ಇವರುಗಳು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ಮಾಳಪ್ಪನಹಟ್ಟಿ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
bengaluruchitradurgaFree health checkupgovernment schoolssuddionesuddione newsಉಚಿತ ಆರೋಗ್ಯ ತಪಾಸಣೆಚಿತ್ರದುರ್ಗಬೆಂಗಳೂರುಸರ್ಕಾರಿ ಶಾಲೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article