Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಮನೆ ಹಸ್ತಾಂತರ

06:48 PM Feb 14, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

Advertisement

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.14 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹೇಮಾವತಿ ಅಮ್ಮನವರ ಕನಸಿನ ಕೂಸು ವಾತ್ಸಲ್ಯ ಮನೆಯನ್ನು ಎನ್.ಬಳಿಗಟ್ಟೆ ಗ್ರಾಮದಲ್ಲಿ ರತ್ನಮ್ಮ ಹಾಗೂ ರಾಮಪ್ಪ ದಂಪತಿಗಳಿಗೆ ವಿತರಿಸಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ರತ್ನಮ್ಮ ರಾಮಪ್ಪ ದಂಪತಿಗಳಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಿ ಮಾತನಾಡುತ್ತ ಗ್ರಾಮೀಣ ಭಾಗಗಳಲ್ಲಿ ವಾಸಿಸುವ ಅತ್ಯಂತ ಕಡು ಬಡವರನ್ನು ಗುರುತಿಸಿ ಡಾ.ಡಿ.ವೀರೇಂದ್ರ ಹೆಗಡೆರವರು ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ಸೂರು ಕಲ್ಪಿಸುತ್ತಿದ್ದಾರಲ್ಲದೆ ಪ್ರತಿ ತಿಂಗಳು ಮಾಶಾಸನವನ್ನು ನೀಡುತ್ತಿದ್ದಾರೆಂದು ಹೇಳಿದರು.

ಯೋಜನಾಧಿಕಾರಿ ಪ್ರವೀಣ್ ಎ.ಜೆ. ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು, ವಲಯದ ಜ್ಞಾನವಿಕಾಸ ಸಮನ್ವಯಾಧಿಕಾರಿ ವಾತ್ಸಲ್ಯ ಮನೆ ವಿತರಣೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

Advertisement
Tags :
chitradurgaHandoverSrikshetra DharmasthalaSrikshetra Dharmasthala Village Development Projectsuddionesuddione newsVatsalya HouseVillage Development Projectಗ್ರಾಮಾಭಿವೃದ್ದಿ  ಯೋಜನೆಚಿತ್ರದುರ್ಗವಾತ್ಸಲ್ಯ ಮನೆಶ್ರೀಕ್ಷೇತ್ರ ಧರ್ಮಸ್ಥಳಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಸುದ್ದಿಒನ್ಸುದ್ದಿಒನ್ ನ್ಯೂಸ್ಹಸ್ತಾಂತರ
Advertisement
Next Article